Government Employee: ವಿವಿಧ ಸೌಲಭ್ಯ ಒದಗಿಸಲು ಮುಂದಾದ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ
ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸಚಿವ ಸಂಪುಟ ನಿರ್ಧರಿಸಿದ್ದು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ.


ಬೆಂಗಳೂರು: ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಮಗ್ರ ಸಂಬಳ ಪ್ಯಾಕೇಜ್ ಖಾತೆಯನ್ನು ತೆರೆಯುವ ರಾಜ್ಯ ಸರ್ಕಾರಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಸೇರಿದಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುವ ರಾಜ್ಯ ಸಚಿವ ಸಂಪುಟ (State Cabinet)ದ ನಿರ್ಣಯವನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ. ಜತೆಗೆ ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ (Government Employee). ಈ ಬಗ್ಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ (Shadakshari) ಅವರು ಪ್ರಕಟಣೆ ಹೊರಡಿಸಿದ್ದಾರೆ.
ಷಡಾಕ್ಷರಿ ಹೇಳಿದ್ದೇನು?
ರಾಜ್ಯ ಸರ್ಕಾರದ ಅಧಿಕಾರಿಗಳು/ನೌಕರರ ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ಷತಿಗಳನ್ನು ಕಾಪಾಡುವ ಸಲುವಾಗಿ ರಾಜ್ಯ ಸಚಿವ ಸಂಪುಟದ ಸಭೆಯ ಈ ಕೆಳಗಿನ ಯೋಜನೆಗಳಿಗೆ ಅನುಮೋದನೆ ನೀಡಿದೆ.
* ವಿವಿಧ ಬ್ಯಾಂಕ್‌ಗಳು ಒದಗಿಸುವ ಸಂಬಳ ಪ್ಯಾಕೇಜ್‌ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು/ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲ ಅಧಿಕಾರಿಗಳು/ನೌಕರರಿಗೆ (ಸರ್ಕಾರಿ/ಸರ್ಕಾರಿ ಸಂಸ್ಥೆಗಳು ಇತ್ಯಾದಿ) ಕಡ್ಡಾಯಗೊಳಿಸುವುದು.
* ಬ್ಯಾಂಕ್‌ಗಳು/ಅಂಚೆ ಕಚೇರಿಗಳು ನೀಡುವ ಪಿಎಂಜೆಜೆಬಿವೈ (PMJJBY) ಮತ್ತು ಪಿಎಂಎಸ್‌ಬಿವೈ (PMSBY) ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು/ನೌಕರರನ್ನು ಪ್ರೋತ್ಸಾಹಿಸುವುದು.
* ಬ್ಯಾಂಕುಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂಪ್ರೇರಿತ ಆಧಾರದ ಮೇಲೆ ವೈಯಲ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಅಧಿಕಾರಿಗಳು/ನೌಕರರನ್ನು ಪ್ರೋತ್ಸಾಹಿಸುವುದು.
ಈ ಸಂಬಂಧ 1 ವಾರದೊಳಗೆ ಸರ್ಕಾರಿ ಆದೇಶ ಹೊರ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಟಕ ಸರ್ಕಾರವು ಸರ್ಕಾರಿ ಮತ್ತು ಇತರ ಸರ್ಕಾರಿ ಅಂಗ ಸಂಸ್ಥೆಗಳ ಉದ್ಯೋಗಿಗಳಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈಗಾಗಲೇ ಜಾರಿಯಲ್ಲಿರುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸುಗಮಗೊಳಿಸಲು ಸರ್ಕಾರದಿಂದ ನೇರವಾಗಿ/ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಅಧಿಕಾರಿಗಳು/ನೌಕರರಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆಯನನು ಜಾರಿಗೆ ತರುವ ಕುರಿತು ಚರ್ಚಿಸಲು ವಿವಿಧ ಪ್ರಮುಖ ಬ್ಯಾಂಕ್ ಅಧಿಕಾರಿಗಳೊಂದಿಗೆ ಮತ್ತು ರಾಜ್ಯದ ಸರ್ಕಾರಿ ನೌಕರರ ಸಂಘಗಳ ಅಧ್ಯಕ್ಷರು/ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ: Bengaluru News: ಫೆ. 20ರಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಮ್ಮಿಲನ ಸಮಾವೇಶ, ಕಾರ್ಯಾಗಾರ; ಸಾಂದರ್ಭಿಕ ರಜೆ ಮಂಜೂರು
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪ್ರದಾನ ಕಾರ್ಯದರ್ಶಿ ಎಚ್.ಗಿರಿಗೌಡ, ಗೌರವಾಧ್ಯಕ್ಷ ಎಸ್.ಬಸವರಾಜು, ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಸ್ ಸಂಗಾ ಮತ್ತಿತರರು ಉಪಸ್ಥಿತರಿದ್ದರು.