ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Salary Package: ಸರಕಾರಿ ನೌಕರರಿಗೆ ಮಹತ್ವದ ಆದೇಶ: ಸಂಬಳ ಪ್ಯಾಕೇಜ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರಿಗೆ ವೇತನವಿಲ್ಲ

ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

ಸಂಬಳ ಪ್ಯಾಕೇಜ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳದವರಿಗೆ ವೇತನವಿಲ್ಲ

-

ಹರೀಶ್‌ ಕೇರ
ಹರೀಶ್‌ ಕೇರ Jan 16, 2026 7:33 AM

ಬೆಂಗಳೂರು, ಜ.16 : ರಾಜ್ಯ ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ” ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ‌(karnataka government) ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

Govt-Employes-2

ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.