ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Traffic fines: ವಾಹನ ಸವಾರರಿಗೆ ಗುಡ್‌ನ್ಯೂಸ್‌.... ಗೂಡ್‌ನ್ಯೂಸ್‌! ಟ್ರಾಫಿಕ್‌ ದಂಡದಲ್ಲಿ ಮತ್ತೆ ಶೇ.50 ಡಿಸೌಂಟ್‌

ರಾಜ್ಯಾದ್ಯಂತ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ 50%ರಿಯಾಯಿತಿ ನೀಡಲು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆಯಿಂದ ಸೆ.12 ವರೆಗೆ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಿದ್ದು, ವಾಹನ ಚಾಲಕರು ಮತ್ತ ಮಾಲೀಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

ಟ್ರಾಫಿಕ್‌ ದಂಡದಲ್ಲಿ ಮತ್ತೆ ಶೇ.50 ಡಿಸೌಂಟ್‌

Rakshita Karkera Rakshita Karkera Aug 22, 2025 7:18 AM

ಬೆಂಗಳೂರು: ಟ್ರಾಫಿಕ್‌ ದಂಡ(Traffic fines) ಉಳಿಸಿಕೊಂಡಿರುವ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದೆ.

ರಸ್ತೆ ಸುರಕ್ಷತೆ , ಕಾನೂನು ಬದ್ಧ ನಡವಳಿಕೆ ಮತ್ತು ಸಾರ್ವಜನಿಕ ಅನುಕೂಲತೆಯನ್ನು ಉತ್ತೇಜಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ 50%ರಿಯಾಯಿತಿ ನೀಡಲು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆಯಿಂದ ಸೆ.12 ವರೆಗೆ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಿದ್ದು, ವಾಹನ ಚಾಲಕರು ಮತ್ತ ಮಾಲೀಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

ಪ್ರಕಟಣೆಯ ವಿವರ ಇಲ್ಲಿದೆ

ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ: Narendra Modi: ಕೆಟ್ಟ ರಸ್ತೆಗಳು, ಟ್ರಾಫಿಕ್‌ ಸಮಸ್ಯೆ; ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಪುಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018- 19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ. ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.