ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Midday Meal Workers: ಬಿಸಿಯೂಟ ನೌಕರರಿಗೆ ಗುಡ್‌ ನ್ಯೂಸ್‌; ಗೌರವ ಧನ 1000 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Midday Meal Workers: 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಬಿಸಿಯೂಟ ನೌಕರರಿಗೆ ಗುಡ್‌ ನ್ಯೂಸ್‌; ಗೌರವ ಧನ 1000 ರೂ. ಹೆಚ್ಚಳ

Profile Prabhakara R Jun 18, 2025 10:16 PM

ಬೆಂಗಳೂರು: ಬಿಸಿಯೂಟ ನೌಕರರಿಗೆ (Midday Meal Workers) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಗೌರವ ಸಂಭಾವನೆ ಹೆಚ್ಚಳದಿಂದ ಮುಖ್ಯ ಅಡುಗೆಯವರಿಗೆ 4,700 ಹಾಗೂ ಸಹಾಯಕ ಅಡುಗೆಯವರಿಗೆ 4,600 ರೂ. ಸಿಗಲಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಸುತ್ತೋಲೆ ಹೊರಡಿಸಿದೆ. 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು 1000 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ‘ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿರುವ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಆದೇಶವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ.

_Midday Meal Workers

ಹೆಚ್ಚಿಸಲಾಗಿರುವ ರೂ.1000 ಮಾಸಿಕ ಸಂಭಾವನೆ ಮೊತ್ತವನ್ನು ಪಾವತಿಸಲು ಅಗತ್ಯವಿರುವ ಅನುದಾನವನ್ನು ರಾಜ್ಯ ಯೋಜನೆ ಕ್ಷೀರಭಾಗ್ಯ ಲೆಕ್ಕ ಶೀರ್ಷಿಕೆಯಡಿ ನಿಗದಿಯಾಗಿರುವ ಅನುದಾನದಿಂದ ಪಾವತಿಸಬೇಕು. ನೇರ ನಗದು ವರ್ಗಾವಣೆ ವೇದಿಕೆ (Direct Benefit Transfer) ಮೂಲಕವೇ ಪಾವತಿಸಲು ಕ್ರಮ ವಹಿಸಲು ಸೂಚಿಸಲಾಗಿದೆ.

ಈ ಸುದ್ದಿಯನ್ನೂ ಓದಿ | World Environment Day: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಅಳವಡಿಸಲು ಕ್ರಮ: ಸಿಎಂ ಸಿದ್ದರಾಮಯ್ಯ