Job Recruitment: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ಹೊಸ ನೇಮಕಾತಿಗೆ ಸರ್ಕಾರ ತಡೆ
Job Recruitment: ನೇಮಕಾತಿಗಾಗಿ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆ ಹಿಡಿಯಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ-1 ಉಮಾ ವರದಯ್ಯ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯನ್ನು ಉಲ್ಲಂಘಿಸುವ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.


ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ (Job Recruitment) ಹೊರಡಿಸುವುದನ್ನು ತಡೆ ಹಿಡಿಯಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದಕ್ಕೆ ಸಂಬಂಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ-1 ಉಮಾ ವರದಯ್ಯ ಸುತ್ತೋಲೆ ಹೊರಡಿಸಿದ್ದು, ಒಂದು ವೇಳೆ ಸುತ್ತೋಲೆಯನ್ನು ಉಲ್ಲಂಘಿಸಿದರೆ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
25.11.2024 ಸುತ್ತೋಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದೆಂದು ಸೂಚಿಸಲಾಗಿತ್ತು. ಆದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ, ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ. ಅಲ್ಲದೇ ದಿನಾಂಕ: 25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Job Guide: ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 74 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಬ್ಯಾಂಕ್ ಆಫ್ ಬರೋಡಾದಲ್ಲಿದೆ 146 ಹುದ್ದೆ; ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಬ್ಯಾಂಕ್ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಬರೋಡಾ (Bank of Baroda) ವಿವಿಧ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2025). ದೇಶಾದ್ಯಂತ ಒಟ್ಟು 146 ಸೀನಿಯರ್ ರಿಲೇಷನ್‌ಶಿಪ್ ಮ್ಯಾನೇಜರ್ ಪೋಸ್ಟ್ ಖಾಲಿ ಇದ್ದು, ಪದವಿ ಪೂರೈಸಿದ ಮತ್ತು ಕಾರ್ಯಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು(Job Guide). ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 15.
ಹುದ್ದೆಗಳ ವಿವರ
ಡೆಪ್ಯುಟಿ ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ - 1 ಹುದ್ದೆ, ವಯೋಮಿತಿ: ಗರಿಷ್ಠ 57 ವರ್ಷಖಾಸಗಿ ಬ್ಯಾಂಕರ್ - 3 ಹುದ್ದೆ, ವಯೋಮಿತಿ: 33–50 ವರ್ಷಗ್ರೂಪ್ ಹೆಡ್ - 4 ಹುದ್ದೆ, ವಯೋಮಿತಿ: 31–45 ವರ್ಷಟೆರಿಟರಿ ಹೆಡ್ - 17 ಹುದ್ದೆ, ವಯೋಮಿತಿ: 27–40 ವರ್ಷಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ - 101 ಹುದ್ದೆ, ವಯೋಮಿತಿ: 24–35 ವರ್ಷವೆಲ್ತ್ ಸ್ಟ್ರಾಟಜಿಸ್ಟ್ (ಹೂಡಿಕೆ ಮತ್ತು ವಿಮೆ) - 18 ಹುದ್ದೆ, ವಯೋಮಿತಿ: 24 – 45 ವರ್ಷಪ್ರೊಡಕ್ಟ್ ಹೆಡ್-ಪ್ರವೇಟ್ ಬ್ಯಾಂಕಿಂಗ್ - 1 ಹುದ್ದೆ, ವಯೋಮಿತಿ: 24 – 45 ವರ್ಷಪೋರ್ಟ್‌ಫೋಲಿಯೊ ರಿಸರ್ಚ್ ಅನಾಲಿಸ್ಟ್ 1 ಹುದ್ದೆ, ವಯೋಮಿತಿ: 22 – 35 ವರ್ಷ
ಸಡಿಲಿಕೆ
ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ಲಭ್ಯ.ಈ ಸುದ್ದಿಯನ್ನೂ ಓದಿ: ADA Recruitment 2025: ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿದೆ 137 ಹುದ್ದೆ; ಹೀಗೆ ಅಪ್ಲೈ ಮಾಡಿ
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್ ಅಭ್ಯರ್ಥಿಗಳು 600 ರೂ. ಮತ್ತು ಎಸ್‌ಸಿ/ಎಸ್‌ಟಿ, ಪಿಡಬ್ಲ್ಯುಡಿ, ಮಹಿಳಾ ಅಭ್ಯರ್ಥಿಗಳು100 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.BOB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.bankofbaroda.in/career/current-opportunities/recruitment-of-professionals-on-contractual-basis-for-various-department)* ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.