ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chitradurga Bus Accident: ಬಸ್‌ಗಳ ರಾತ್ರಿ ಪ್ರಯಾಣಕ್ಕೆ ವಿರಾಮ: ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಚಿಂತನೆ

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೇ ಒಳ್ಳೆಯದು. ಈ ನಿದ್ದೆ ಮಂಪರಿನಿಂದ ಆಗೋ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನ ನಿಲ್ಲಿಸಿ ವಿಶ್ರಾಂತಿ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು, ಡಿ.27: ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು (Hiriyur) ಬಳಿ ಸಂಭವಿಸಿದ ಬಸ್ ಅಪಘಾತ (Chitradurga Bus Accident) ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ರೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರೋದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡೋರು ಸಂಜೆಯೇ ನಿದ್ದೆ ಮಾಡಿ ಎದ್ದರೇ ಒಳ್ಳೆಯದು. ಈ ನಿದ್ದೆ ಮಂಪರಿನಿಂದ ಆಗೋ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನ ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12ರಿಂದ 4 ಗಂಟೆವರೆಗೆ ನಾಲ್ಕು ಗಂಟೆಗಳ ಕಾಲ ನ್ಯಾಷನಲ್ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Chitradurga Bus Accident: ಚಿತ್ರದುರ್ಗ ಬಸ್‌ ಅಪಘಾತದಲ್ಲಿ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ರಾತ್ರಿ ಸಮಯ ಟ್ರಕ್, ಲಾರಿ, ಬಸ್ ಚಾಲಕರು ನಾಲ್ಕು ಗಂಟೆವರೆಗೂ ವಿಶ್ರಾಂತಿ ಮಾಡಿ ಆಮೇಲೆ ಚಾಲನೆ ಮಾಡಲಿ. ಬಸ್‌ಗಳಲ್ಲಿ ಇಬ್ಬರು ಡ್ರೈವರ್ ಇರುತ್ತಾರೆ. ಆದರೆ, ಟ್ರಕ್ ಲಾರಿಗಳಲ್ಲಿ ಒಬ್ಬರೇ ಇರುತ್ತಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಕೊಡಲಿ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಜೊತೆಗೆ ಹಿರಿಯೂರಿನಲ್ಲಿ ನಡೆದ ಬಸ್ ದುರಂತದ ಸ್ಥಳದಲ್ಲಿ ಪದೇ ಪದೇ ಆಕ್ಸಿಡೆಂಟ್‌ಗಳು ಆಗುತ್ತಿದ್ದು, ಈ ಬಗ್ಗೆ ಕೇಂದ್ರ ಗಮನಹರಿಸಬೇಕೆಂದು ತಿಳಿಸಿದ್ದಾರೆ.

ಹರೀಶ್‌ ಕೇರ

View all posts by this author