ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokayukta Raid: ರಾಜ್ಯದೆಲ್ಲೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಶಾಕ್

ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಡಿಕೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತ ಪರಿಶೀಲನೆ (Lokayukta raid) ನಡೆಸಿದ್ದಾರೆ. ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯದೆಲ್ಲೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಶಾಕ್

ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ -

ಹರೀಶ್‌ ಕೇರ
ಹರೀಶ್‌ ಕೇರ Nov 25, 2025 10:28 AM

ಬೆಂಗಳೂರು, ನ.25: ಇಂದು ಮುಂಜಾನೆ ಭ್ರಷ್ಟಾಚಾರದ (Corruption) ಆರೋಪ ಹೊತ್ತ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ (Lokayukta raid) ಅಧಿಕಾರಿಗಳು, ಆಸ್ತಿ ಹಾಗೂ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಶೇಖರಣೆ, ಲಂಚ ಕೇಳಿದ ದೂರು, ಲಂಚಕ್ಕಾಗಿ ಕಡತಕ್ಕೆ ಸಹಿ ಹಾಕದೆ ಸತಾಯಿಸುತ್ತಿರುವುದು ಇತ್ಯಾದಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ದಾಳಿಗೊಳಗಾದ ಅಧಿಕಾರಿಗಳು

ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) - RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ

ಮಂಡ್ಯ - ನಗರ ಪಾಲಿಕೆ CAO ಪುಟ್ಟಸ್ವಾಮಿ

ಬೀದರ್ - ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್

ಮೈಸೂರು - ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್​ಪೆಕ್ಟರ್ ರಾಮಸ್ವಾಮಿ ಸಿ

ಧಾರವಾಡ - ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ

ಧಾರವಾಡ - ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್

ಶಿವಮೊಗ್ಗ - SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್

ದಾವಣಗೆರೆ - APMC ಸಹ ನಿರ್ದೇಶಕ ಪ್ರಭು ಜೆ.

ಮೈಸೂರು - ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ

ಹಾವೇರಿ - ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ

ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತ, ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ: ಡಿಕೆಶಿ

ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ‌ ನಿರ್ದೇಶಕ ಜೆ. ಪ್ರಭು ಅವರ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ನಗರದ ಆಂಜನೇಯ ಬಡಾವಣೆಯ 12 ಕ್ರಾಸ್‌ನಲ್ಲಿರುವ ಪ್ರಭು ಅವರ ಮನೆ‌, ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೊರೆ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಈ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಡಿವೈಎಸ್‌ಪಿ ಕಲಾವತಿ, ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಂಡ ಪರಿಶೀಲನೆ ನಡೆಸುತ್ತಿದೆ ಎಂದು ಲೋಕಾಯುಕ್ತ ಕಚೇರಿ ಮೂಲಗಳು ಮಾಹಿತಿ ನೀಡಿವೆ.

ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸುಭಾಷ ನಾಟಿಕರ್ ಅವರ ನಿವಾಸದಲ್ಲಿ ಲೋಕಾಯಕ್ತ ಪೋಲೀಸರು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಯಾಲಕ್ಕಿ ಶೆಟ್ಟರ್ ಕಾಲೊನಿಯ ನಿವಾಸಕ್ಕೆ ಬೆಳ್ಳಂಬೆಳಿಗ್ಗೆಯೇ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ದಾಖಲೆ, ಇತ್ಯಾದಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಡಿಕೇರಿ ಲೋಕೋಪಯೋಗಿ ಇಲಾಖೆಯ ಎಇಇ ಗಿರೀಶ ಅವರ ಇಲ್ಲಿನ ವಸತಿ ಗೃಹ ಹಾಗೂ ಮೈಸೂರಿನ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ‌ನಡೆಸಿದ್ದಾರೆ‌. ಇದರೊಂದಿಗೆ ಮೈಸೂರಿನ ಹೂಟಗಳ್ಳಿ ನಗರಸಭೆಯ ಕಂದಾಯ ನಿರೀಕ್ಷಕ ರಾಮಸ್ವಾಮಿ ಅವರ ತಿ.‌ನರಸೀಪುರದ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.