ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026 PDF Wownload: ಕರ್ನಾಟಕ ಬಜೆಟ್‌ನ ಪಿಡಿಎಫ್ ಪ್ರತಿ ಹೀಗೆ ಡೌನ್​ಲೋಡ್ ಮಾಡಿ

Karnataka Budget 2026-27 PDF Document Download: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಇಲ್ಲಿದೆ ಬಜೆಟ್‌ನ ಪಿಡಿಎಫ್‌ ಪ್ರತಿ.

ಕರ್ನಾಟಕ ಬಜೆಟ್‌ನ ಪಿಡಿಎಫ್ ಪ್ರತಿ ಹೀಗೆ ಡೌನ್​ಲೋಡ್ ಮಾಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ -

Ramesh Ballamoole
Ramesh Ballamoole Mar 6, 2026 12:13 PM

ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ದಾಖಲೆಯ 17ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ. ಒಟ್ಟು 4.5 ಲಕ್ಷ ಕೋಟಿ ರುಪಾಯಿ ಗಾತ್ರದ ಬಜೆಟ್‌ ಇದಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿಯಂತಹ ಮೂಲ ಸೌಕರ್ಯ ವಲಯಗಳ ಜತೆಗೆ ಶಿಕ್ಷಣ ಮತ್ತು ಮಹಿಳಾ ಸಬಲೀಕರಣಕ್ಕೆ ಸರ್ಕಾರ ಬಜೆಟ್‌ನಲ್ಲಿ ಸಿಂಹಪಾಲು ನೀಡಿದೆ.

ಇನ್ನು ಮೂಲಸೌಕರ್ಯ ಮತ್ತು ಇತರ ಬಂಡವಾಳ ವೆಚ್ಚಕ್ಕಾಗಿ (Capital Expenditure) 71,924 ಕೋಟಿ ರು. ಮೀಸಲಿಡಲಾಗಿದೆ. ಮಾರುಕಟ್ಟೆ ಸಾಲಗಳ ಮರುಪಾವತಿಗಾಗಿ 29,007 ಕೋಟಿ ರು. ಹಾಗೂ ಕೇಂದ್ರ ಸರ್ಕಾರದ ಸಾಲದ ಮರುಪಾವತಿಗೆ 2,700 ಕೋಟಿ ರು.ಗಳನ್ನು ತೆಗೆದಿರಿಸಲಾಗಿದೆ.

ಕರ್ನಾಟಕ ಬಜೆಟ್​ 2026-27 ಪಿಡಿಎಫ್ ಪ್ರತಿ ಇಲ್ಲಿದೆ:



56,432 ಸರಕಾರಿ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.