Stone Pleting: ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್, ಮದ್ದೂರು ಉದ್ವಿಗ್ನ
ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ನಡೆದಿದ್ದ ಕಲ್ಲು ತೂರಾಟದಲ್ಲಿ 8 ಮಂದಿ ಗಾಯಗೊಂಡಿದ್ದರು. ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಗಣೇಶಭಕ್ತರು ಆರೋಪಿಸಿದ್ದರು. ಇದನ್ನು ವಿರೋಧಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

-

ಮಂಡ್ಯ : ಮಂಡ್ಯ (Mandya news) ಜಿಲ್ಲೆಯ ಮದ್ದೂರಿನಲ್ಲಿ (Madduru) ಗಣೇಶನ ಮೆರವಣಿಗೆ (Ganesh visarjan) ಮೇಲೆ ಕಲ್ಲು ತೂರಾಟ (Stone Pelting) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳುವುದನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದರು.
ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ನಡೆದಿದ್ದ ಕಲ್ಲು ತೂರಾಟದಲ್ಲಿ 8 ಮಂದಿ ಗಾಯಗೊಂಡಿದ್ದರು. ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಗಣೇಶಭಕ್ತರು ಆರೋಪಿಸಿದ್ದರು. ಇದನ್ನು ವಿರೋಧಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಮದ್ದೂರು ಬಂದ್‌ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು, ಹೀಗಾಗಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಬೆಳಿಗ್ಗೆ 6 ರಿಂದ ನಾಳೆ ಮಧ್ಯಾಹ್ನ 12 ವರೆಗೆ ಪಟ್ಟಣದಾದ್ಯಂತ ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಹೊರಡಿಸಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅದೇಶಿಸಿದ್ದಾರೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಮುಸ್ಲಿಮರ ಹಸಿರು ಬಾವುಟ ಕಿತ್ತು ಹಿಂದೂಗಳ ಕೇಸರಿ ಬಾವುಟ ಹಾರಿಸಿದ್ದಾರೆ. ಮದ್ದೂರಿನ ಹೂವಿನ ಸರ್ಕಲ್ ಬಳಿ ಘಟನೆ ನಡೆದಿದೆ. ಹೂವಿನ ವೃತ್ತದಲ್ಲಿ ಹಾರಾಡುತಿದ್ದ ಹಸಿರು ಬಾವುಟವನ್ನು ಹಿಂದೂ ಕಾರ್ಯಕರ್ತರ ಕಿತ್ತು ಕೇಸರಿ ಬಾವುಟ ಹಾರಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ: Stone Pelting: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, 8 ಮಂದಿಗೆ ಗಾಯ