ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Street Dogs: ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ ನಾಯಿ ಕಡಿತ! 23 ರೇಬೀಸ್ ಸಾವು

ರಾಜ್ಯದಲ್ಲಿ ಇತ್ತೀಚೆಗೆ ಚಿಕ್ಕ ಮಕ್ಕಳು ಎನ್ನದೆ ಎಲ್ಲರ ಮೇಲು ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚಾಗಿವೆ. ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ಈ ಅಂಶಗಳು ರಿವೀಲ್‌ ಆಗಿವೆ. 2025ರ ಜ.1ರಿಂದ ಜೂ.30ರ ನಡುವೆ 2,60 ಲಕ್ಷ ಜನರಿಗೆ ನಾಯಿ ಕಡಿತ ವರದಿಯಾಗಿದೆ.

ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ ನಾಯಿ ಕಡಿತ! 23 ರೇಬೀಸ್ ಸಾವು

ಹರೀಶ್‌ ಕೇರ ಹರೀಶ್‌ ಕೇರ Aug 4, 2025 7:32 AM

ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿ ಕಡಿತ (street dog attack) ಪ್ರಕರಣಗಳು ಕಳವಳಕಾರಿ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಕಳೆದ ಜನವರಿಯಿಂದ ಜುಲೈವರೆಗೆ ರಾಜ್ಯದಲ್ಲಿ ಬರೋಬ್ಬರಿ 2.60 ಲಕ್ಷ ಜನರಿಗೆ ನಾಯಿ ಕಚ್ಚಿದ್ದು, ಕಳೆದ ಒಂದೇ ವಾರದಲ್ಲಿ 10 ಸಾವಿರ ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಗ್ಯ ಇಲಾಖೆ ಬೆಚ್ಚಿಬಿಳಿಸುವ ಮಾಹಿತಿ ನೀಡಿದ್ದು, ಕಳೆದ ಆರೇ ತಿಂಗಳಲ್ಲಿ ರಾಜ್ಯದಲ್ಲಿ ಒಟ್ಟು 2.60 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 23 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ (Health department) ತಿಳಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಚಿಕ್ಕ ಮಕ್ಕಳು ಎನ್ನದೆ ಎಲ್ಲರ ಮೇಲು ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚಾಗಿವೆ. ಆರೋಗ್ಯ ಇಲಾಖೆ ನೀಡಿರುವ ವರದಿಯಲ್ಲಿ ಈ ಅಂಶಗಳು ರಿವೀಲ್‌ ಆಗಿವೆ. 2025ರ ಜ.1ರಿಂದ ಜೂ.30ರ ನಡುವೆ 2,60 ಲಕ್ಷ ಜನರಿಗೆ ನಾಯಿ ಕಡಿತ ವರದಿಯಾಗಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 1,69,672 ನಾಯಿ ಕಡಿತ ಮತ್ತು 18 ರೇಬೀಸ್ ಸಾವು ವರದಿಯಾಗಿದ್ದವು. 2024ರಲ್ಲಿ ರಾಜ್ಯದಲ್ಲಿ ಇಡೀ ವರ್ಷದಲ್ಲಿ 3.6 ಲಕ್ಷ ನಾಯಿ ಕಡಿತ ಹಾಗೂ 42 ರೇಬೀಸ್ ಸಾವು ಸಂಭವಿಸಿದ್ದವು. 2023ರ ಮೊದಲ ಆರು ತಿಂಗಳ ಅವಧಿಗೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.36.20ರಷ್ಟು ಹೆಚ್ಚಳ ಕಂಡುಬಂದಿದೆ.

ನಾಯಿ ಕಡಿತವನ್ನು ಅಧಿಸೂಚಿತ ಕಾಯಿಲೆ ಪಟ್ಟಿಗೆ 2022ರಲ್ಲಿ ಕರ್ನಾಟಕ ಸರ್ಕಾರ ಸೇರ್ಪಡೆ ಮಾಡಿತ್ತು. ಅದಾದ ನಂತರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ನಾಯಿ ಕಡಿತ ಹಾಗೂ ದೃಢಪಟ್ಟ ರೇಬೀಸ್‌ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ವರದಿ ಮಾಡುತ್ತಿವೆ. 2022ರ ನಂತರ ರಾಜ್ಯದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ಈ ವರ್ಷ ವರದಿಯಾಗಿವೆ.

ಇದನ್ನೂ ಓದಿ: Street Dog attack: ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ