ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಮೈಸೂರು ನಗರದ ಒಂಟಿಕೊಪ್ಪಲ್‌ನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Profile Prabhakara R Apr 8, 2025 9:35 PM

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2nd PUC Results 2025) ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಒಂಟಿಕೊಪ್ಪಲ್‌ನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಫಲಿತಾಂಶ ನೋಡಿದ ಬಳಿಕ ಕಲಾಮಂದಿರ ಅಪಾರ್ಟೆಂಟ್‌ನಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಫೇಲ್ ಆಗಿದ್ದಕ್ಕೆ ಮನನೊಂದ ಐಶ್ವರ್ಯ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ, ಅಕ್ರಮ ಸಂಬಂಧ ಹೊಂದಿದ್ದ ಪತಿಯತ್ತ ಸಂಶಯ

asma self harming

ಬೆಂಗಳೂರು: ಪತಿಗೆ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ (illicit relationship) ಇದೆ ಎಂಬ ಕಾರಣದಿಂದ ಮನನೊಂದಿದ್ದ ಪತ್ನಿಯೊಬ್ಬಳು (wife) ಶವವಾಗಿ ಪತ್ತೆಯಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ (self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆದರೆ ಇದು ಗಂಡನೇ (husband) ಮಾಡಿರುವ ಕೊಲೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಸಾವಿಗೀಡಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಈಕೆ ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪತಿ- ಪತ್ನಿ ನಡುವೆ ಜಗಳವಾಗುತ್ತಲೂ ಇತ್ತು. ಇದೀಗ ಆಕೆ ನೇಣಿಗೆ ಶರಣಾಗಿದ್ದಾಳೆ. ಆದರೆ ಆಕೆಯ ಪೋಷಕರು, ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಸೆರೆಹಿಡಿದ ಪೊಲೀಸರು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ (Hubballi news) ಪೊಲೀಸರ ಗುಂಡಿನ ಸದ್ದು ಅನುರಣಿಸಿದೆ. ತಮ್ಮ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡಿನ ದಾಳಿ (Police Firing) ನಡೆಸಿ ಬಂಧಿಸಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ. ರೌಡಿಶೀಟರ್ ಮಲಿಕ್ ಆದೋನಿ ಎಂಬಾತನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿ ಆತನನ್ನು ಬಂಧಿಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ವಿಶ್ವನಾಥ್ ಅವರು ರೌಡಿಶೀಟರ್ ಮಲಿಕ್ ಆದೋನಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ನಿನ್ನೆ ಹಣಕಾಸಿನ ವಿಚಾರವಾಗಿ ಗಲಾಟೆ ಆಗಿತ್ತು. ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್, ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ವಿಶ್ವನಾಥ್, ಪಿಸಿಗಳಾದ ಕಲ್ಲನಗೌಡ, ಶರೀಫ್ ಎನ್ನುವವರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರು ಮತ್ತು ಆರೋಪಿ ಮಲಿಕ್‌ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.