SSLC exam: ತಾಯಿ ಅಗಲಿಕೆಯ ನೋವಿನ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ
SSLC exam: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ನೋವಿನ ಮಧ್ಯೆ ವಿದ್ಯಾರ್ಥಿ, 10ನೇ ತರಗತಿ ಪರೀಕ್ಷೆ ಬರೆದು, ನಂತರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.


ಗಂಗಾವತಿ: ತಾಯಿಯ ಅಗಲಿಕೆಯ ನೋವಿನ ನಡುವೆಯೂ ವಿದ್ಯಾರ್ಥಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC exam) ಬರೆದ ಮನಕಲಕುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕೇಸರಹಟ್ಟಿಯಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅಡಿವೆಯ್ಯ ಸ್ವಾಮಿ ಎಂಬ 10ನೇ ತರಗತಿಯ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ (38) ಶುಕ್ರವಾರ ಬೆಳಗ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಈ ನೋವಿನ ಮಧ್ಯೆಯೂ ಪರೀಕ್ಷೆ ಬರೆದಿರುವ ವಿದ್ಯಾರ್ಥಿ, ನಂತರ ಅಮ್ಮನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.
ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ವಿದ್ಯಾರ್ಥಿ ಅಡಿವೆಯ್ಯ ಸ್ವಾಮಿ ಮನೆಗೆ ಬಂದ ಶಿಕ್ಷಕರು ಸಾಂತ್ವನ ಹೇಳಿದ್ದಾರೆ. ಬಳಿಕ ಪರೀಕ್ಷಾ ಕೇಂದ್ರದವರೆಗೆ ಕರೆದೊಯ್ಯಲು ನೆರವಾಗಿದ್ದಾರೆ. ಪರೀಕ್ಷೆಯ ಬಳಿಕ ವಿದ್ಯಾರ್ಥಿ ತನ್ನ ತಾಯಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.
ವಿದ್ಯಾರ್ಥಿ ತಾಯಿ ವಿಜಯಲಕ್ಷ್ಮಿ ಅವರಿಗೆ ಕಳೆದ ಕೆಲ ದಿನಗಳ ಹಿಂದೆ ಸ್ನಾನದ ಕೋಣೆಯಲ್ಲಿ ಬಿದ್ದು ತಲೆಗೆ ಗಾಯವಾಗಿತ್ತು. ಇದರಿಂದ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ವಿಜಯಲಕ್ಷ್ಮಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | ಮೃತ ತಾಯಿಯ ಆಶೀರ್ವಾದ ಪಡೆದು ಪರೀಕ್ಷೆ ಬರೆದ ಪುತ್ರ; ಭಾವುಕ ಕ್ಷಣಕ್ಕೆ ನೆಟ್ಟಿಗರು ಸಾಕ್ಷಿ
ಕರ್ನಾಟಕ ಬಂದ್; ನಾಳೆ ಶಾಲೆಗಳಿಗೆ ರಜೆ ಇರುತ್ತಾ?
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕೆಲ ಸಂಘಟನೆಗಳು ಬೆಂಬಲ ನೀಡಿದ್ದು, ಶನಿವಾರ ಬೆಳಗ್ಗೆ 6ಗಂಟೆಯಿಂದಲೇ ಬಂದ್ ಆರಂಭಿಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ. ಇದರಿಂದ ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಹೀಗಾಗಿ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಒಂದೆಡೆ ಕನ್ನಡಪರ ಸಂಘಟನೆಗಳು ಮಾ. 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮತ್ತೊಂದೆಡೆ ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಹೀಗಾಗಿ ಶಾಲೆಗಳಿಗೆ ರಜೆ ಇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದು, ಈವರೆಗೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಮಧ್ಯಾಹ್ನ ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜತೆ ಸಭೆ ಮಾಡಲಾಗುತ್ತದೆ. ಅವರು ಏನು ಹೇಳುತ್ತಾರೋ, ಅದರ ಮೇಲೆ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಾರಿಗೆ ಹಾಗೂ ಭದ್ರತೆ ಇಲ್ಲದೆ ಶಾಲೆ ತೆರೆಯಲು ಆಗಲ್ಲ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಹೀಗಾಗಿ ಮುಂದೂಡಲು ನಾವು ಸಿದ್ಧವಾಗಿದ್ದೇವೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | Karnataka Bandh: ನಾಳೆ ಕರ್ನಾಟಕ ಬಂದ್ ಖಚಿತ: ಯಾರ ಬೆಂಬಲ, ಏನಿದೆ, ಏನಿಲ್ಲ? ವಿವರ ಇಲ್ಲಿದೆ