ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

R Ashok: ಜಮೀನು ಅಕ್ರಮ ಪ್ರಕರಣದಲ್ಲಿ ಆರ್‌ ಅಶೋಕ್‌ಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್‌

ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇದೊಂದು ರಾಜಕೀಯ ಪ್ರೇರಿತ ಎಫ್‌ಐಆರ್‌ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಬಗರ್ ಹುಕುಂ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅನರ್ಹರಿಗೆ ಜಮೀನು ಹಂಚಿಕೆ ಮಾಡಿದ್ದರು ಎಂದು 2018 ರಲ್ಲಿ ಕಾಂಗ್ರೆಸ್‌ ಸರ್ಕಾರ ಆರೋಪಿಸಿತ್ತು. ನಂತರ ಎಸಿಬಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಆರ್‌ ಅಶೋಕ್

ನವದೆಹಲಿ, ಡಿ.17: ಬಗರ್ ಹುಕುಂ (Bagair Hukum) ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಅವರಿಗೆ ಸುಪ್ರೀಂ ಕೋರ್ಟ್‌ (Supreme Court) ಬಿಗ್‌ ರಿಲೀಫ್‌ ನೀಡಿದೆ. ಅಶೋಕ್‌ ಅವರ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್‌ ಅನ್ನು ಕೋರ್ಟ್‌ ರದ್ದು ಪಡಿಸಿದೆ.

ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಇದೊಂದು ರಾಜಕೀಯ ಪ್ರೇರಿತ ಎಫ್‌ಐಆರ್‌ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಬಗರ್ ಹುಕುಂ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅನರ್ಹರಿಗೆ ಜಮೀನು ಹಂಚಿಕೆ ಮಾಡಿದ್ದರು ಎಂದು 2018 ರಲ್ಲಿ ಕಾಂಗ್ರೆಸ್‌ ಸರ್ಕಾರ ಆರೋಪಿಸಿತ್ತು. ನಂತರ ಎಸಿಬಿಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ರೈತರ ಆತ್ಮಹತ್ಯೆ ಪ್ರಕರಣಗಳು (farmers suicide case) ಗಣನೀಯವಾಗಿ ಇಳಿಕೆಯಾಗುತ್ತಿದೆ. ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 2,800 ರೈತರು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಮೂರು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿರುವುದನ್ನು ಅಂಕಿ ಅಂಶಗಳು ದೃಢಪಡಿಸಿವೆ. ಇದು ರಾಜ್ಯ ಸರ್ಕಾರದ ಯೋಜನೆಗಳು ವಿಫಲವಾಗಿಲ್ಲ ಎಂಬುದನ್ನು ತೋರಿಸುತ್ತವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (Agriculture Minister N Chaluvarayaswamy) ತಿಳಿಸಿದ್ದಾರೆ. ಸದನದಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ( BJP MLA Aravind Bellad) ಕೇಳಿದ ಪ್ರಶ್ನೆಗೆ ಅವರು ಈ ಉತ್ತರವನ್ನು ನೀಡಿದ್ದಾರೆ.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕೇಳಿದ ಪ್ರಶ್ನೆಗೆ ಅಂಕಿಅಂಶಗಳ ಸಹಿತ ಲಿಖಿತ ಉತ್ತರ ನೀಡಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಹರೀಶ್‌ ಕೇರ

View all posts by this author