ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಕೇಸ್‌ ಸುಪ್ರೀಂ ಕೋರ್ಟ್‌ನಿಂದ ವಜಾ

Supreme Court: ಹಾವೇರಿ ಜಿಲ್ಲೆಯ ರೈತನ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ನ್ಯಾಯಪೀಠ ವಿಚಾರಣೆ ನಡೆಸಿತು.

ನವದೆಹಲಿ: ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejaswi Surya) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ (karnataka high court) ಆದೇಶದ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ (supreme court)‌ ಸೋಮವಾರ ನಿರಾಕರಿಸಿದೆ. ಜೊತೆಗೆ, ಕಾನೂನು ವಿಷಯಗಳನ್ನು ರಾಜಕೀಯಗೊಳಿಸುವುದರ ವಿರುದ್ಧ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಹಾವೇರಿ ಜಿಲ್ಲೆಯ ರೈತನ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದಚಂದ್ರನ್ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. “ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಮತದಾರರ ಮುಂದೆ ನಿಮ್ಮ ಹೋರಾಟಗಳನ್ನು ಹೋರಾಡಿ” ಎಂದು ಸಿಜೆಐ ಅರ್ಜಿಯನ್ನು ತಿರಸ್ಕರಿಸಿದರು.

ಪ್ರಕರಣದ ಹಿನ್ನೆಲೆ

ತೇಜಸ್ವಿ ಸೂರ್ಯ ಅವರು, 2024ರ ನ.7ರಂದು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ಜಮೀನಿನ ಪಹಣಿಯಲ್ಲಿ ವಕ್ಸ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಎಸ್ಪಿ ಸ್ಪಷ್ಟನೆ ನೀಡಿದ ಬಳಿಕ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು. ತೇಜಸ್ವಿ ಅವರು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿತ್ತು. ಪ್ರಕರಣ ರದ್ದು ಕೋರಿ ತೇಜಸ್ವಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ, ಹಾವೇರಿಯ ಪೊಲೀಸ್ ತನಿಖಾಧಿಕಾರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: Tejaswi Surya: ಮುದ್ದಾದ ಅತಿಥಿಯನ್ನು ಮನೆಗೆ ಕರೆತಂದ ತೇಜಸ್ವಿ ಸೂರ್ಯ-ಶಿವಶ್ರೀ ದಂಪತಿ

ಹರೀಶ್‌ ಕೇರ

View all posts by this author