ನವದೆಹಲಿ, ಫೆ.27: ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವಿಜಯಿ ಅಭ್ಯರ್ಥಿ ಎಸ್.ಎನ್ ಸುಬ್ಬಾರೆಡ್ಡಿ (MLA Subbareddy) ಅವರ ಶಾಸಕ ಸ್ಥಾನ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ (Suprime Court) ತಡೆ ನೀಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು. ಸಿಜೆಐ ಸೂರ್ಯಕಾಂತ್ ಮಹತ್ವದ ತೀರ್ಪು ನೀಡಿದ್ದಾರೆ. ಆದಾಯ ಬಹಿರಂಗಪಡಿಸಿದರೆ ಸಾಕೆ? ವ್ಯವಹಾರವನ್ನು ಬಹಿರಂಗಪಡಿಸಬೇಕೇ? ಈ ಬಗ್ಗೆ ವಿಚಾರಣೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಸಿ. ಮುನಿರಾಜುಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಇದೇ ವೇಳೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ ತಿಂಗಳಿಗೆ ಮುಂದೂಡಿತು.
ಪ್ರಕರಣವೇನು?
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯ ವೇಳೆ ಎಸ್‌ಎನ್ ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರವು ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸಿದ ನ್ಯಾ. ಎಂಜಿಎಸ್ ಕಮಲ್ ಅವರ ಪೀಠವು ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ನೀಡಿತ್ತು. ಆದರೆ, 2ನೇ ಅಭ್ಯರ್ಥಿ ಸಿ. ಮುನಿರಾಜುಗೆ ಗೆಲುವು ಎಂದು ಎಂದು ಘೋಷಿಸಲು ನಿರಾಕಣೆ ಮಾಡಿತ್ತು. ಅಸಿಂಧುಗೊಳಿಸಿದ ಆದೇಶ ಚುನಾವಣಾ ಆಯೋಗಕ್ಕೆ, ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲು ಪೀಠವು ನಿರ್ದೇಶನ ನೀಡಿತ್ತು
2023ರಲ್ಲಿ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸುಬ್ಬಾರೆಡ್ಡಿಯವರು 82 ಸಾವಿರ ಮತ, ಬಿಜೆಪಿ ಅಭ್ಯರ್ಥಿ 62 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಬರೋಬ್ಬರಿ 20 ಸಾವಿರ ಮತಗಳ ಅಂತರದಲ್ಲಿ ಸುಬ್ಬಾರೆಡ್ಡಿ ಗೆಲುವು ಸಾಧಿಸಿ ಶಾಸಕರಾಗಿದ್ದರು..