ನವದೆಹಲಿ, ನ.25: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದೆ. 2 ವಾರಗಳಲ್ಲಿ ಶರಣಾಗಲು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಆದೇಶವನ್ನು ಮಾಡಿದೆ.
ಯೋಗೇಶ್ ಗೌಡರನ್ನು 2016ರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳ ಪೈಕಿ 17 ಜನರನ್ನು ಅಪರಾಧಿಗಳು ಎಂದು ತೀರ್ಮಾನಿಸಿ 2026ರ ಏಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಎಂದು ಜನಪ್ರತಿನಿಧಿ ನ್ಯಾಯಾಲಯ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರಿಂದಾಗಿ ಅವರು ಜೈಲಿಗೆ ಹೋಗಿದ್ದರು. ಇದನ್ನು ಪ್ರಶ್ನಿಸಿ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
Government orders seizure of ‘Basava Mantapa’ work: ರವಿ ಹಂಜ್ ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸರ್ಕಾರ ಆದೇಶ
ಜೂನ್ ತಿಂಗಳಿನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಇದರಿಂದಾಗಿ ವಿನಯ್ ಜೈಲಿನಿಂದ ಬಿಡುಗಡೆ ಆಗಿದ್ದರು. ಹೈಕೋರ್ಟ್ನ ತೀರ್ಪು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿತ್ತು. ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿತ್ತು. ಪೀಠವು ಬುಧವಾರ ತೀರ್ಪು ಪ್ರಕಟಿಸಿದ್ದು ಜಾಮೀನು ರದ್ದು ಮಾಡಿದೆ. ಹೀಗಾಗಿ ಅವರು ಮತ್ತೆ ಜೈಲು ಶಿಕ್ಷೆ ಎದುರಿಸಲಿದ್ದಾರೆ.