Banu Mushtaq: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಇಂದು ಸುಪ್ರೀಂ ಕೋರ್ಟ್ ವಿಚಾರಣೆ
Supreme court: ಸೆ.22ರಂದು ನವರಾತ್ರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ನಡೆಸಬೇಕೆಂದು ಅರ್ಜಿದಾರರ ಪರ ವಕೀಲರು ಸಿಜೆಐ ಬಿ.ಆರ್.ಗವಾಯಿ ನೇತೃತ್ವದ ಪೀಠದ ಮುಂದೆ ಮನವಿ ಮಾಡಿದರು. ಶುಕ್ರವಾರ ಮೇಲ್ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

-

ನವದೆಹಲಿ : ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ (Mysuru dasara) ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu Mushtaq) ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ (Karnataka high court) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme court) ಒಪ್ಪಿಕೊಂಡಿದ್ದು, ಇಂದು ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಸಾಹಿತಿ ಬಾನು ಮುಷ್ಕಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾ ಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಮೇಲ್ಮನವಿ ಸಲ್ಲಿಸಲಾಗಿದ್ದು, ಶುಕ್ರವಾರ ವಿಚಾರಣೆ ನಡೆಸಲು ಕೋರ್ಟ್ ಸಮ್ಮತಿಸಿದೆ. ಸೆ.22ರಂದು ನವರಾತ್ರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ನಡೆಸಬೇಕೆಂದು ಅರ್ಜಿದಾರರ ಪರ ವಕೀಲರು ಸಿಜೆಐ ಬಿ.ಆರ್.ಗವಾಯಿ ನೇತೃತ್ವದ ಪೀಠದ ಮುಂದೆ ಮನವಿ ಮಾಡಿದರು.
ಶುಕ್ರವಾರ ಮೇಲ್ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಬಾನು ಅವರು ಈ ಹಿಂದೆ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿರುವುದರಿಂದ ಅವರ ಭಾಗವಹಿಸುವಿಕೆಯು ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.