Karnataka assembly session: ಮೇಲ್ಮನೆಯಲ್ಲೂ ಬಾಲ್ಯ ವಿವಾಹ ನಿಷೇಧ, ದೇವದಾಸಿ ಪದ್ಧತಿ ನಿಷೇಧ ಮಸೂದೆ ಪಾಸ್
Karnataka assembly session: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಮಸೂದೆ ವಿಧಾನ ಪರಿಷತ್‌ನಲ್ಲೂ ಅನುಮೋದನೆ ಸಿಕ್ಕಿದೆ. ಹೊಸ ನಿಯಮ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆಯಾಗಲಿದೆ.


ವಿಧಾನಪರಿಷತ್: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಮಸೂದೆ (Child Marriage Prohibition Bill) ಹಾಗೂ ದೇವದಾಸಿ ಪದ್ಧತಿ ನಿಷೇಧ ಮಸೂದೆ ವಿಧಾನ ಪರಿಷತ್‌ನಲ್ಲೂ ಅನುಮೋದನೆ ಸಿಕ್ಕಿದೆ. ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನ ಪರಿಷತ್‌ನಲ್ಲಿ (karnataka assembly session) ಈ ಎರಡೂ ಮಸೂದೆಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಸಲಾಯಿತು.
ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ಇದುವರೆಗೂ ಸಂಪೂರ್ಣ ತಡೆ ಸಾಧ್ಯವಾಗಿಲ್ಲ. ಬಾಲ್ಯವಿವಾಹವನ್ನು ಬೇರು ಸಮೇತ ಕಿತ್ತೊಗೆಯಬೇಕು. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಜಾರಿಗೆ ತರಲಾಗಿದೆ. ಹೊಸ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆಯಾಗಲಿದೆ. ಜತೆಗೆ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಿಗೆ 25 ಸಾವಿರ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.
ಈ ಸುದ್ದಿಯನ್ನೂ ಓದಿ | Karnataka Assembly Session: ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ: ಲಕ್ಷ್ಮಿ ಹೆಬ್ಬಾಳ್ಕರ್
ಬಳಿಕ ಕರ್ನಾಟಕ ದೇವದಾಸಿ ಪದ್ಧತಿ ಮಸೂದೆ ಅಂಗೀಕರಿಸಲಾಯಿತು. ದೇವದಾಸಿ ಪದದ ನಿರ್ದಿಷ್ಟ ವ್ಯಾಖ್ಯಾನವನ್ನು ಈ ಕಾಯ್ದೆಯಲ್ಲಿ ಮಾಡಲಾಗಿದ್ದು, ಇದರಿಂದ ನೈಜ ಫಲಾನುಭವಿಯನ್ನು ಗುರುತಿಸಲು ಹಾಗೂ ಅವರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಉನ್ನತಿಗೆ ನೆರವಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾಹಿತಿ ನೀಡಿದರು.