ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Aland voter deletion case: ಆಳಂದ ಮತಕಳ್ಳತನ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

Special Investigation Team: ಸಿಐಡಿ ವಿಭಾಗದ ಅಪರ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ಎಸ್‌ಐಟಿ ತಂಡದಲ್ಲಿ ಇರಲಿದ್ದಾರೆ.

ಆಳಂದ ಮತಕಳ್ಳತನ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

-

Prabhakara R Prabhakara R Sep 20, 2025 8:25 PM

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ ಸೇರಿ ರಾಜ್ಯದಲ್ಲಿ ನಡೆದಿರುವ ಮತ ಕಳ್ಳತನ ಪ್ರಕರಣಗಳ (Aland voter deletion case) ತನಿಖೆಗೆ ವಿಶೇಷ ತನಿಖಾ ತಂಡ (Special Investigation Team) ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಐಡಿ ವಿಭಾಗದ ಅಪರ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ಎಸ್‌ಐಟಿ ತಂಡದಲ್ಲಿ ಇರಲಿದ್ದಾರೆ.

ಆದೇಶದಲ್ಲಿ ಏನಿದೆ?

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆಯ ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ಅಪರಾಧ ತನಿಖಾ ಸಂಸ್ಥೆಯಾದ ಸಿಐಡಿಯಲ್ಲಿನ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ. ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರು ಎಸ್‌ಐಟಿ ಮುಖ್ಯಸ್ಥರಾಗಿರಲಿದ್ದಾರೆ.

ಈ ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಗೆಸಂಬಂಧಿಸಿದಂತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 2(ಯು} ಅಡಿಯಲ್ಲಿ ಪೊಲೀಸ್ ಠಾಣಾಧಿಕಾರವನ್ನು ನೀಡಲಾಗಿದೆ. ಆಳಂದ ಮತ ಕಳ್ಳತನ ಪ್ರಕರಣವೂ ಸೇರಿ ಕರ್ನಾಟಕ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ / ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಡಿಜಿ & ಐಜಿಪಿ ಅವರು ವರ್ಗಾಯಿಸಬೇಕು ಹಾಗೂ ವಿಶೇಷ ತನಿಖಾ ತಂಡಕ್ಕೆ ಅವಶ್ಯವಿರುವ ಇತರೆ ಅಧಿಕಾರಿ/ಸಿಬ್ಬಂದಿಗಳನ್ನು ಒದಗಿಸಬೇಕು.

ಇನ್ನು ಎಸ್‌ಐಟಿ ಅಧಿಕಾರಿಗಳು, ಸ್ಥಳೀಯ ಪೊಲೀಸ್ ಘಟಕದ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸಿಐಡಿ ಪೊಲೀಸ್ ಮಹಾನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಸದರಿ ವಿಶೇಷ ತನಿಖಾ ತಂಡವು ಎಲ್ಲಾ ಆಯಾಮಗಳಲ್ಲಿ ಈ ಸಂಬಂಧ ದಾಖಲಾಗಬಹುದಾದ ಇತರೆ ಎಲ್ಲಾ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಂಡು ಶೀಘ್ರವೇ ತನಿಖೆಯನ್ನು ಪೂರ್ಣಗೊಳಿಸಿ ತನಿಖಾ ವರದಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ. 193ರ ಅಡಿಯಲ್ಲಿ ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಹಾಗೂ ತನಿಖಾ ವರದಿಯನ್ನು ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಅವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ | DK Shivakumar: ಮರು ಮತ ಎಣಿಕೆ ನಡೆದರೂ ನಂಜೇಗೌಡ ಅವರೆ ಮತ್ತೆ ಗೆಲ್ಲುವ ವಿಶ್ವಾಸವಿದೆ: ಡಿ.ಕೆ.ಶಿವಕುಮಾರ್