ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gig Workers Welfare Bill 2025: ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲೂ ಅಂಗೀಕಾರ

Karnataka assembly session: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಬುಧವಾರ ಮಂಡಿಸಿ, ಅಂಗೀಕಾರ ಪಡೆದರು. ಇ-ಕಾಮರ್ಸ್‌ ಹಾಗೂ ಫುಡ್‌ ಡೆಲಿವರಿ ಕಂಪನಿಗಳ ಡೆಲಿವರಿ ಬಾಯ್ಸ್‌ಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ.

ಬೆಂಗಳೂರು: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ (Gig Workers Welfare Bill 2025) ವಿಧಾನಸಭೆಯಲ್ಲಿ ಮಂಗಳವಾರ ಅನುಮೋದನೆ ಸಿಕ್ಕಿತ್ತು. ಇದೀಗ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆತಿದೆ. ಇ-ಕಾಮರ್ಸ್‌ ಹಾಗೂ ಫುಡ್‌ ಡೆಲಿವರಿ ಕಂಪನಿಗಳ ಡೆಲಿವರಿ ಬಾಯ್ಸ್‌ಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಈ ಮಸೂದೆಯನ್ನು ರೂಪಿಸಿದೆ. ಇದಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ಇತ್ತೀಚೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರು. ಹೀಗಾಗಿ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ಅಂಗೀಕಾರ ಪಡೆಯಲಾಗಿದೆ.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿ, ಅಂಗೀಕಾರ ಪಡೆದರು.

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಸುಮಾರು 2.30 ಲಕ್ಷದಷ್ಟಿದೆ. ಆದರೆ ಇವರಿಗೆ ಅಪಘಾತ ಪರಿಹಾರ ಸೇರಿ ಯಾವುದೇ ಸರ್ಕಾರಿ ಸೌಲಭ್ಯಗಳು ಇಲ್ಲ. ಅಪಘಾತ ಅಥವಾ ಮರಣ ಸಮಯದಲ್ಲಿ ಅವರನ್ನು ಅವಲಂಬಿಸಿದವರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈ ನಿಟ್ಟಿನಲ್ಲಿ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ - 2024 ಅನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

ಈ ಸುದ್ದಿಯನ್ನೂ ಓದಿ | Karnataka assembly session: ಒಳ ಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುತ್ತೇವೆ: ಸಿಎಂ ಘೋಷಣೆ

ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ( ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ ಜಾರಿಗೆ ತರುವ ಮೂಲಕ ಅಪಘಾತ ಪರಿಹಾರ, ನೈಸರ್ಗಿಕ ಮರಣ ಪರಿಹಾರ, ಅಂತ್ಯ ಸಂಸ್ಕಾರ ವೆಚ್ಚ, ವಿವಾಹ ಭತ್ಯೆ, ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ಭವಿಷ್ಯ ನಿಧಿ, ವಸತಿ ಸೌಲಭ್ಯ ಈ ರೀತಿಯಲ್ಲಿ ಹಂತ ಹಂತವಾಗಿ ಒದಗಿಸಲು ನಿರ್ಧಾರ ಮಾಡಲಾಗಿದೆ.