ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vande Bharat Express: ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು; ಆ.10ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

Vande Bharat Express: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಆ.10ಕ್ಕೆ ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಚಾಲನೆ

Prabhakara R Prabhakara R Aug 5, 2025 3:33 PM

ನವದೆಹಲಿ: ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಸಂಚಾರ ಸೇರಿ ಮೂರು ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು (Vande Bharat Express) ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ತಿಳಿಸಿದ್ದಾರೆ.

ಮೂರು ಒಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಸಚಿವ ಜೋಶಿ ಕೋರಿಕೆಗೆ ಸ್ಪಂದನೆ

ಈ ಹಿಂದೆ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ಒಂದೇ ಭಾರತ್‌ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಈ ಸುದ್ದಿಯನ್ನೂ ಓದಿ | Metro Yellow Line: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಆ.10ರಂದು ಹಳದಿ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ರೈಲು ಸಂಚಾರದ ವೇಳೆ

ಈ ನೂತನ ಒಂದೇ ಭಾರತ್‌ ರೈಲು ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ತಲುಪಲಿದೆ. ವಾಪಸ್‌ ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.

ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ರೈಲ್ವೆ ಸೌಲಭ್ಯ ಕಲ್ಪಿಸುವಲ್ಲಿ ಶ್ರಮಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಸಚಿವ ಪ್ರಲ್ಹಾದ್ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.‌