Dharmasthala: ಕುಕ್ಕರ್ ಬಾಂಬ್ ಉಗ್ರರ ಟಾರ್ಗೆಟ್ ಆಗಿತ್ತು ಧರ್ಮಸ್ಥಳ ದೇವಾಲಯ!
ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ.


ಬೆಂಗಳೂರು : 2022 ರಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬಾಂಬ್ (cooker bomb) ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಮಂಗಳೂರು (Mangaluru) ನಗರದಲ್ಲಿ 2022ರಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್‌ನ ಅಸಲಿ ಟಾರ್ಗೆಟ್ ಧರ್ಮಸ್ಥಳದ (Dharmasthala) ದೇಗುಲ ಆಗಿತ್ತೆಂಬ ಸ್ಫೋಟಕ ಸಂಗತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆಯಲ್ಲಿ ಬಯಲು ಮಾಡಿದೆ.
ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ. ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್ ಟೈಮರ್ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್ಗೆ ನಿಗದಿ ಮಾಡಿದ್ದ ಪರಿಣಾಮ ಅದು ಮಾರ್ಗ ಮಧ್ಯೆಯೇ ಆಟೋರಿಕ್ಷಾದೊಳಗೆ ಸ್ಫೋಟವಾಗಿತ್ತು.
ಕಳ್ಳನನ್ನು ಹಿಡಿಯಲು ಹೋದ ಪೇದೆಗೆ ಚೂರಿ ಇರಿತ
ವಿಜಯಪುರ: ಕಳ್ಳನನ್ನು ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಇರಿದಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಮನೆ ಕಳ್ಳತನಕ್ಕೆ ಬಂದಿದ್ದ ಕಳ್ಳರನ್ನು ಹಿಡಿಯಲು ಪೊಲೀಸರು ಬೆನ್ನಟ್ಟುವಾಗ ಪೊಲೀಸ್ ಪೇದೆಗೆ ಚಾಕುವಿನಿಂದ (Stabbing Case) ಇರಿಯಲಾಗಿದೆ. ಬಸವನಬಾಗೇವಾಡಿಯ ಖಾನ್ ಆಸ್ಪತ್ರೆಯ ಪಕ್ಕದಲ್ಲಿ ಮಂಗಳವಾರ ರಾತ್ರಿ ಕಳ್ಳರು ಬಂದಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಕಳ್ಳರನ್ನು ಹಿಡಿಯಲು ಹೋದಾಗ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿಯಲಾಗಿದೆ.
ಪಿಐ ಗುರುಶಾಂತ ದಾಶ್ಯಾಳ ಸೇರಿ ನಾಲ್ಕು ಪೊಲೀಸರು, ಕಳ್ಳರಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರನ್ನು ಹಿಡಿಯಲು ಪೊಲೀಸರು ಬೆನ್ನಟ್ಟುತ್ತಿದ್ದಂತೆ ಖದೀಮರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೇದೆ ರಮೇಶ ಅವರು ಒಬ್ಬ ಕಳ್ಳನನ್ನು ಹಿಡಿದಿದ್ದಾರೆ. ಈ ವೇಳೆ ಕಳ್ಳ ತನ್ನ ಜೇಬಿನಲ್ಲಿದ್ದ ಚಾಕು ತೆಗೆದು ಪೇದೆಯ ತೊಡೆ ಹಾಗೂ ಮತ್ತೆರಡು ಕಡೆಗೆ ಇರಿದು ಪರಾರಿಯಾಗಿದ್ದಾನೆ.
ಸಿಪಿಐ ಡ್ರೈವರ್ ಹಾಗೂ ಪೊಲೀಸ್ ಪೇದೆಯಾಗಿರುವ ರಮೇಶ ಗೂಳಿ(36) ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದಾರೆ. ಸದ್ಯ ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದು, ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ತಂಡವೊಂದು ಕೈಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ಓಡಾಡಿರುವ ದೃಶ್ಯ ಸ್ಥಳೀಯರ ಸಿಸಿ ಟಿವಿಯಲ್ಲಿ ಸೆರೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು ಆ ಆತಂಕ ಮರೆಯುವ ಮುನ್ನವೇ ಸದ್ಯ ಮತ್ತೆ ಜಿಲ್ಲೆಯಲ್ಲಿ ಪೊಲೀಸರ ಮೇಲೆ ಕಳ್ಳರು ಹಲ್ಲೆ ಮಾಡಿದ್ದು ನಿಜಕ್ಕೂ ಜಿಲ್ಲೆಯ ಜನರಲ್ಲಿ ಭಯ ಹುಟ್ಟಿಸುವಂತಾಗಿದೆ.
ಇದನ್ನೂ ಓದಿ: Dharmasthala News: ಧರ್ಮಸ್ಥಳದಲ್ಲಿ ವಿಡಿಯೊ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ