Rahul Gandhi: ಮತಗಳ್ಳತನ ಆರೋಪ; ದಾಖಲೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್
Electoral Fraud: ಪತ್ರಿಕಾಗೋಷ್ಠಿಯಲ್ಲಿ ನೀವು ತೋರಿಸಿರುವ ದಾಖಲೆಗಳು, ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ನೀವು ಹೇಳಿದ್ದೀರಿ. ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚಿಸಿದೆ.


ಬೆಂಗಳೂರು: ಮತಗಳ್ಳತನ ಆರೋಪಕ್ಕೆ ಸಂಬಂಧಿಸಿ ದಾಖಲೆಗಳನ್ನು ಒದಗಿಸುವಂತೆ ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಆ.7ರಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಡಲಾದ ಆರೋಪಗಳ ವಿಚಾರಣೆಗೆ ದಾಖಲೆಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ನೀವು ತೋರಿಸಿರುವ ದಾಖಲೆಗಳು, ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ನೀವು, ಅದನ್ನು ಚುನಾವಣಾ ಆಯೋಗದ ಡೇಟಾ ಎಂದು ಹೇಳಿದ್ದೀರಿ. ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದೀರಿ. ನೀವು, ಈ ಐಡಿ ಕಾರ್ಡ್ ಪರ್ ದೋ ಬಾರ್ ವೋಟ್ ಲಗಹೈ, ವೋ ಜೋ ಟಿಕ್ ಹೈ, ಪೋಲಿಂಗ್ ಬೂತ್ ಕೆ ಆಫೀಸರ್ ಕಿಹೈ ಎಂದು ಹೇಳಿದ್ದೀರಿ.
ವಿಚಾರಣೆಯಲ್ಲಿ, ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ. ಕಚೇರಿ ನಡೆಸಿದ ಪ್ರಾಥಮಿಕ ವಿಚಾರಣೆಯು ಪ್ರಸ್ತುತಿಯಲ್ಲಿ ನೀವು ತೋರಿಸಿರುವ ಟಿಕ್ ಗುರುತು ಮಾಡಿದ ದಾಖಲೆ ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ ಎಂದು ಬಹಿರಂಗವಾಗಿದೆ.
ಈ ಸುದ್ದಿಯನ್ನೂ ಓದಿ | Pralhad Joshi: ರಾಹುಲ್ ಗಾಂಧಿ ಅವರದ್ದು ʼಹಿಟ್ ಅಂಡ್ ರನ್ ಕೇಸ್ʼ ಇದ್ದಂತೆ: ಪ್ರಲ್ಹಾದ್ ಜೋಶಿ
ಆದ್ದರಿಂದ, ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸಬೇಕು. ಇದರಿಂದ ಈ ಚುನಾವಣಾ ಆಯೋಗ ಕಚೇರಿಯಿಂದ ವಿವರವಾದ ವಿಚಾರಣೆ ಕೈಗೊಳ್ಳಬಹುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
Notice to Shri Rahul Gandhi, Hon’ble Member of Parliament and LoP, Lok Sabha.@ECISVEEP pic.twitter.com/plSfgoeytZ
— Chief Electoral Officer, Karnataka (@ceo_karnataka) August 10, 2025