ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SSLC Exam Fees 2025: ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;‌ SSLC ಪರೀಕ್ಷೆ-2 ಮತ್ತು 3ಕ್ಕೆ ಶುಲ್ಕ ವಿನಾಯಿತಿ ನೀಡಿದ ಸರ್ಕಾರ

SSLC Exam Fees 2025: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಈಗಾಗಲೇ ಶುಲ್ಕ ವಿನಾಯಿತಿ ಇದ್ದು, ಸದರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 2025ರ ಎಸ್ಎಸ್ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿಗೆ ಮಾತ್ರ ಸೀಮಿತಗೊಳಿಸಿ ಶುಲ್ಕ ವಿನಾಯಿತಿ ನೀಡಲು ಸರ್ಕಾರ ಸಹಮತಿ ನೀಡಿದೆ.

SSLC ಪರೀಕ್ಷೆ-2 ಮತ್ತು 3ಕ್ಕೆ ಶುಲ್ಕ ವಿನಾಯಿತಿ ನೀಡಿದ ಸರ್ಕಾರ

Profile Prabhakara R Jun 21, 2025 2:03 PM

ಬೆಂಗಳೂರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ( SSLC Exam Fees 2025) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. 2025ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ -2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಪ್ರಕಾಶ್‌ ಅವರು ಆದೇಶ ಹೊರಡಿಸಿದ್ದಾರೆ.

2024-25ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-1ನ್ನು ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಸಲಾಗಿದ್ದು, ಮೇ 2ರಂದು ಫಲಿತಾಂಶ ಪ್ರಕಟಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ 2025ರ ಎಸ್ಎಸ್ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ – 2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿರುವುದಾಗಿ ಪ್ರಕಟಿಸಲಾಗಿತ್ತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಈಗಾಗಲೇ ಶುಲ್ಕವಿನಾಯಿತಿ ಇದ್ದು, ಸದರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 2025ರ ಎಸ್ಎಸ್ಎಲ್‌ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿಗೆ ಮಾತ್ರ ಸೀಮಿತಗೊಳಿಸಿ ಶುಲ್ಕ ವಿನಾಯಿತಿ ನೀಡಲು ಸರ್ಕಾರ ಸಹಮತಿ ನೀಡಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಿದ್ದಲ್ಲಿ ಮೇಲ್ಕಂಡಂತೆ ಅಂದಾಜು ರೂ.12.68 ಕೋಟಿ ಮೊತ್ತವು ಮಂಡಲಿಗೆ ಹೊರೆಯಾಗುತ್ತದೆ. ಈ ಸಂಬಂಧ ಸದರಿ ಮೊತ್ತವನ್ನು ಸರ್ಕಾರದಿಂದ ಮರುಭರಣ ಮಾಡಲು ಕೋರಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಏಕ ಕಡತದಲ್ಲಿ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲು ಆದೇಶಿಸಿದೆ.

ಈ ಸುದ್ದಿಯನ್ನೂ ಓದಿ | KPTCL Recruitment: ಕೆಪಿಟಿಸಿಎಲ್‌ನಲ್ಲಿ 35 ಸಾವಿರ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಸಿಎಂ ಘೋಷಣೆ