ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ರೆಡ್‌ ಅಲರ್ಟ್; ನಾಳೆ ಕರಾವಳಿ, ಮಲೆನಾಡು ಭಾಗದಲ್ಲಿ ಆರ್ಭಟಿಸಲಿದ್ದಾನೆ ವರುಣ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.

ರೆಡ್‌ ಅಲರ್ಟ್; ನಾಳೆ ಕರಾವಳಿ, ಮಲೆನಾಡು ಭಾಗದಲ್ಲಿ ಆರ್ಭಟಿಸಲಿದ್ದಾನೆ ವರುಣ!

ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆ ಬಳಿ ಭಾನುವಾರ ಮಳೆ ನೀರು ನಿಂತಿದ್ದರಿಂದ ಅಯ್ಯಪ್ಪ ಅಂಡರ್ ಪಾಸ್ ಕಡೆಗೆ ನಿಧಾನಗತಿಯ ಸಂಚಾರವಿತ್ತು.

Prabhakara R Prabhakara R Aug 17, 2025 5:35 PM

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗಸ್ಟ್‌ 18ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ನೀಡಲಾಗಿದ್ದು, ವರುಣ ಆರ್ಭಟಿಸಲಿದ್ದಾನೆ. ಇನ್ನು ಕೊಡಗು, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ವ್ಯಾಪಕ ಮಳೆಯಾಗಲಿದೆ (Karnataka Rains). ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದ್ದು, ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಆಗಸ್ಟ್ 17 ರಿಂದ 20ರವರೆಗೆ ಕರ್ನಾಟಕ ಕರಾವಳಿಯಲ್ಲಿ ಮತ್ತು ಹೊರಗೆ ಗಂಟೆಗೆ 40 - 50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಆಗಸ್ಟ್‌ 19ರಂದು ಕರಾವಳಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಆಗಸ್ಟ್‌ 19ರಂದು ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಬಿರುಸಿನ ಮಳೆಯಾಗುವ ನಿರೀಕ್ಷೆ ಇದೆ. ಹಾಗೆಯೇ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಅದೇ ರೀತಿ ಆಗಸ್ಟ್‌ 20ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್‌ 21ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.