ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಯೆಲ್ಲೋ ಅಲರ್ಟ್;‌ ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ನಿರಂತರ ಗಾಳಿಯೊಂದಿಗೆ (ಗಾಳಿಯ ವೇಗ 30-40 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಇಂದಿನ ಹವಾಮಾನ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ

Profile Prabhakara R Jun 1, 2025 6:00 AM

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು (Karnataka Weather) ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜೂನ್‌ 1ರಂದು ಕರಾವಳಿ ಜಿಲ್ಲೆಗಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಒಣ ಹವೆ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಾಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ನಿರಂತರ ಗಾಳಿಯೊಂದಿಗೆ (ಗಾಳಿಯ ವೇಗ 30-40 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.



ಜೂನ್ 3ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.‌ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಜೂನ್ 4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು ಹಗುರ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ ‌5 ಮತ್ತು 6ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಅತಿಯಾದ ಒತ್ತಡ, ಶಿಸ್ತಿಲ್ಲದ ಜೀವನಶೈಲಿ... ಇವುಗಳೇ ಪಾರ್ಶ್ವವಾಯುವಿಗೆ ಕಾರಣ