ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ರಾಜ್ಯದ ಒಳನಾಡಿನಲ್ಲಿ ಅಬ್ಬರಿಸಲಿದೆ ಭಾರಿ ಮಳೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರಲಿದೆ.

ರಾಜ್ಯದ ಒಳನಾಡಿನಲ್ಲಿ ಅಬ್ಬರಿಸಲಿದೆ ಭಾರಿ ಮಳೆ; ಆರೆಂಜ್‌ ಅಲರ್ಟ್‌ ಘೋಷಣೆ

ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ ಬಳಿ ರಸ್ತೆ ಜಲಾವೃತವಾಗಿರುವುದು.

Profile Prabhakara R May 14, 2025 6:32 PM

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಬೆಂಗಳೂರು ಸೇರಿ ಹಲವೆಡೆ ಮಳೆ ಅಬ್ಬರಿಸಿತ್ತು. ಅದೇ ರೀತಿ ಇಂದು (ಬುಧವಾರ) ರಾತ್ರಿ ಕೂಡ ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (Karnataka Rains) ಆರೆಂಜ್‌ ಅಲರ್ಟ್‌ ಘೋಷಿಸಿದೆ. ಇನ್ನು ಮೇ 15ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪುವ ಸಾಧ್ಯತೆಯಿದ್ದು, ಭಾರಿ ಮಳೆಯಾಗುವ (64.5mm - 115.5mm) ಸಾಧ್ಯತೆಯಿದೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರಲಿದೆ.



ಇನ್ನು ಮೇ 16ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಬೀದರ್, ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಸಾಧಾರಣ ಮಳೆ /ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಮೇ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ರಾಮನಗರ, ಚಾಮರಾಜನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆ / ಗುಡುಗು ಸಹಿತ ಗಾಳಿ ಬೀಸುವ ಸಂಭವವಿದೆ.

ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಏನು ನಂಟು?

ಮೇ 19 ಮತ್ತು 20ರಂದು ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.