ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಸಾಧ್ಯತೆ

Karnataka Rains: ಕರಾವಳಿಯಲ್ಲಿ ಮಂಗಳವಾರ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಸಾಧ್ಯತೆ

Profile Prabhakara R Jun 2, 2025 7:32 PM

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಸೋಮವಾರ ಮಳೆಯಾಗಿದೆ. ಅದೇ ರೀತಿ ಮುಂದಿನ ಎರಡು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Karnataka Rains) ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್‌ 4ರವರೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ಜೂನ್ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮಂಗಳವಾರ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮುಖ್ಯವಾಗಿ ಒಣ ಹವೆ ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 4ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.



ಜೂನ್‌ 5ರಂದು ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡುನ ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 6ರಂದು ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಹರಳೆಣ್ಣೆ ಬಳಸುವುದರಿಂದಾಗುವ ಆರೋಗ್ಯ ಪ್ರಯೋಜನಗಳೇನು?

ಜೂನ್‌ 7 ಮತ್ತು 8ರಂದು ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.