ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ಆರೆಂಜ್‌ ಅಲರ್ಟ್;‌ ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ!

Profile Prabhakara R Jun 12, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ರಾತ್ರಿ ಬೆಂಗಳೂರು ಸೇರಿ ವಿವಿಧೆಡೆ ವರುಣ ಅಬ್ಬರಿಸಿದ್ದಾನೆ. ಅದೇ ರೀತಿ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್ 12 ರಿಂದ 15 ರವರೆಗೆ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆಭಾರತ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಜೂನ್‌ 12ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಹಾಸನ ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಕೋಲಾರ ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.



ಜೂನ್‌ 13ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 14ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ತುಮಕೂರು, ಮಂಡ್ಯ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಸಿಕ್ಕಾಪಟ್ಟೆ ತಿಂದ್ರಾ?: ಹೊಟ್ಟೆಭಾರ ಇಳಿಸಲು ಇಲ್ಲಿವೆ ಟಿಪ್ಸ್‌!

ಜೂನ್‌ 15 ಮತ್ತು 16ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಬೀದರ್, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಹಾಸನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ.