ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Weather: ಇಂದಿನ ಹವಾಮಾನ; ಬೆಳಗಾವಿ, ಬಾಗಲಕೋಟೆ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

ಬೆಂಗಳೂರು: ಸೆ.16ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಇದರಿಂದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

ಸೆ.16ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಯಾದಗಿರಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸೆ.17ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸೆ.18ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಸೆ.19ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಅಲರ್ಜಿ; ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ

ಸೆ. 20 ಮತ್ತು 21ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.