Karnataka Weather: ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಮಳೆಯಾಗಿದೆ. ಅದೇ ರೀತಿ ಜುಲೈ 6ರವರೆಗೆ ವ್ಯಾಪಕ ಮಳೆ (Karnataka Weather) ಸುರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ನೀಡಿದೆ. ಇಂದು (ಜುಲೈ 3) ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕಲಬುರಗಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಜುಲೈ 4ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 6ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಕ್ರಮ ಅಳವಡಿಸಿ
ಜುಲೈ 7 ಮತ್ತು 8ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.