Karnataka Rains: ನಾಳೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 21ರಂದು ಜೋರಾದ ಗಾಳಿಯೊಂದಿಗೆ ಚದುರಿದ ಮಳೆಯಿಂದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 22ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) June 20, 2025
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/b1SRAXXaOW
ಜೂನ್ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಜೂನ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ರಾತ್ರಿ ಕಾಡುವ ಕಾಲುನೋವಿಗೇನು ಮದ್ದು?
ಜೂನ್ 25 ಮತ್ತು 26ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ ಮತ್ತು ಗದಗ ಹಗುರದಿಂದ ಮಧ್ಯಮ ಮಳೆಯಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.