Karnataka weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೂನ್ 19ರಂದು ಗುಡುಗಿ ಸಹಿತ ಮಳೆಯಾಗುವ (Karnataka Rains) ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಜೂನ್ 20ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 22ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ರಕ್ತದಾನಕ್ಕೆ ಮೊದಲು, ನಂತರ ಬೇಕಾಗುವ ಆರೈಕೆಯೇನು?
ಜೂನ್ 23 ಮತ್ತು 24ರಂದು ಕರಾವಳಿ ಜಿಲ್ಲೆಗಳು, ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ ಚಾಮರಾಜನಗರ, ದಾವಣಗೆರೆ, ಹಾಸನ ತುಮಕೂರು, ಬಳ್ಳಾರಿ, ವಿಜಯನಗರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.