ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Free Bus Pass: ಕೆಪಿಎಸ್ ಶಾಲೆಗಳ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Free Bus Pass: ಶಾಲಾ ಮಕ್ಕಳಿಗೆ ಫ್ರೀ ಬಸ್ ಪಾಸ್‌ ನೀಡಲು ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ ಅಷ್ಟೇ. ಇದು ಕೇವಲ ಸಲಹೆ ಅಷ್ಟೇ, ಇದಕ್ಕೆ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಬೇಕು. ಹೆಣ್ಣು ಮಕ್ಕಳಿಗೆ ಈಗಾಗಲೇ ಉಚಿತ ಇದೆ. ಗಂಡು ಮಕ್ಕಳಿಗೆ ಪಾಸ್ ಕೊಡಲಾಗುತ್ತಿದೆ. ಆದರೆ, ಉಚಿತ ಇಲ್ಲ‌ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಪಿಎಸ್ ಶಾಲೆಗಳ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ

Profile Prabhakara R Jul 11, 2025 1:59 PM

ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ (Free Bus Pass) ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದರು. ಈ ಬಗ್ಗೆ ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟನೆ ನೀಡಿದ್ದು, ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ. ಶಾಲೆಯಲ್ಲಿ ಓದುವ ಹೆಣ್ಣು ಮಕ್ಕಳಿಗೆ ಈಗಾಗಲೇ ಉಚಿತ ಇದೆ, ಈ ಯೋಜನೆಗೆ 10 ಕೋಟಿ ರೂಪಾಯಿ ಹೆಚ್ಚು ಖರ್ಚು ಆಗುತ್ತದೆ ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್‌ ನೀಡಲು ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ ಅಷ್ಟೇ. ಇದು ಕೇವಲ ಸಲಹೆ ಅಷ್ಟೇ, ಇದಕ್ಕೆ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಬೇಕು. ಹೆಣ್ಣು ಮಕ್ಕಳಿಗೆ ಈಗಾಗಲೇ ಉಚಿತ ಇದೆ. ಗಂಡು ಮಕ್ಕಳಿಗೆ ಪಾಸ್ ಕೊಡುತ್ತೇವೆ. ಸರ್ಕಾರಿ ಕೆಪಿಎಸ್ ಶಾಲೆಯಲ್ಲಿ ಉತ್ತೇಜನ ಕೊಡೋದಕ್ಕೆ ಡಿ.ಕೆ. ಶಿವಕುಮಾರ್ ಆ ರೀತಿ ಹೇಳಿರಬಹುದು. ಅದಕ್ಕೆ ಸುಮಾರು 10 ಕೋಟಿ ಗು ಹೆಚ್ಚು ಖರ್ಚಾಗುತ್ತದೆ.

ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಯಾವುದೇ ಯೋಜನೆ ಜಾರಿಯಾಗಬೇಕಾದರೂ ಸಂಪುಟ ಸಭೆಯಲ್ಲಿ ಚರ್ಚೆಯಾಗಿ ತೀರ್ಮಾನ ಆಗಬೇಕು. ಆಗ ಇದು ಜಾರಿಗೆ ಆಗುತ್ತದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ʼʼಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ; ಡಿಕೆಶಿ ಕೂಡ ಇದನ್ನೇ ಹೇಳಿದ್ದಾರೆʼʼ: ಸಿದ್ದರಾಮಯ್ಯ ಸ್ಪಷ್ಟನೆ

ಡಿಕೆಶಿ ಏನು ಹೇಳಿದ್ದರು?

ಬಸ್‌ ಪಾಸ್‌ ವ್ಯವಸ್ಥೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್​ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.