Priyank Kharge: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ ಆರೋಪಿ ಗುರುತು ಪತ್ತೆ
RSS: ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.

-

ಬೆಂಗಳೂರು: ಆರ್‌ಎಸ್‌ಎಸ್ (RSS) ಕುರಿತು ನೀಡಿದ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಫೋನ್ ಮಾಡಿ ಬೆದರಿಕೆ (threat call) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ ಮೂಲದ ದಾನೇಶ್ ನರೋಣ ಎಂದು ಗುರುತಿಸಲಾಗಿದೆ.
ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಇದನ್ನು ರೆಕಾರ್ಡ್ ಮಾಡಿಕೊಂಡಿದ್ದ ಸಚಿವರು, ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬಹಿರಂಗಪಡಿಸಿದ್ದರು. ಆದರೆ ಈ ಕುರಿತು ಪೊಲೀಸ್ ದೂರು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: Priyank Kharge: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ, ಆಡಿಯೋ ರೆಕಾರ್ಡ್ ರಿಲೀಸ್ ಮಾಡಿದ ಖರ್ಗೆ
ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ಕುರಿತು ಚಿಂತನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಖರ್ಗೆ ಮನವಿ ಮಾಡಿದ್ದರು. ಆರ್‌ಎಸ್‌ಎಸ್‌ಗೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಈ ಬಗ್ಗೆ ಹೆಚ್ಚಿನ ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಖರ್ಗೆಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ತನಿಖೆಗಾಗಿ ಗೃಹ ಸಚಿವ ಜಿ ಪರಮೇಶ್ವರ ಆದೇಶ ನೀಡಿದ್ದರು.