Actress Ramya: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಮೂವರು ಸಿಸಿಬಿ ಪೊಲೀಸರಿಂದ ಅಂದರ್
Actor Darshan: ದರ್ಶನ್ ಕೇಸ್ ಬಗ್ಗೆ ಜು. 24ರಂದು ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ಸ್ಟೇಟ್‌ಮೆಂಟ್ ಉಲ್ಲೇಖಿಸಿ ರಮ್ಯಾ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಸಾಮಾನ್ಯ ಜನರಿಗೆ ಎಲ್ಲೋ ಒಂದು ಕಡೆ ಹೋಪ್ ಇದೆ. ನ್ಯಾಯ ಸಿಗುತ್ತೆ ಎಂದಿದ್ದರು. ಅದಾದ ಮೇಲೆ ಅವರಿಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜ್ ಬರಲು ಆರಂಭವಾಗಿತ್ತು.

ರಮ್ಯಾ

ಬೆಂಗಳೂರು : ನಟಿ ರಮ್ಯಾಗೆ (Actress Ramya) ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಟ ದರ್ಶನ್ (Actor Ramya) ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿಗೆ ಸಂಬಂಧಿಸಿ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇದೀಗ ಮೂವರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
43 ಇನ್ಸ್ಟಾಗ್ರಾಮ್ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಮ್ಯಾ ಬಳಿ ಅಶ್ಲೀಲ ಮೆಸೇಜ್ ಅಕೌಂಟ್ ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್‌ಗಳಿಂದ ಅಶ್ಲೀಲ ಮೆಸೇಜ್‌ಗಳು ಬಂದಿದ್ದವು? ಯಾವ ನಂಬರ್‌ಗಳಿಂದ ಬೆದರಿಕೆ ಕರೆ ಬಂದಿತ್ತು? ಯಾವ ಅಕೌಂಟ್‌ಗಳಿಂದ ಅಶ್ಲೀಲ ಮೆಸೇಜುಗಳು ಬಂದಿದ್ದವು ಇತ್ಯಾದಿ ಎಲ್ಲದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.
ದರ್ಶನ್ ಕೇಸ್ ಬಗ್ಗೆ ಜು. 24ರಂದು ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ಸ್ಟೇಟ್‌ಮೆಂಟ್ ಉಲ್ಲೇಖಿಸಿ ರಮ್ಯಾ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಸಾಮಾನ್ಯ ಜನರಿಗೆ ಎಲ್ಲೋ ಒಂದು ಕಡೆ ಹೋಪ್ ಇದೆ. ನ್ಯಾಯ ಸಿಗುತ್ತೆ ಎಂದಿದ್ದರು. ಅದಾದ ಮೇಲೆ ಅವರಿಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಮೆಸೇಜ್ ಬರಲು ಆರಂಭವಾಗಿತ್ತು. ಈ ಬಗ್ಗೆ ಮಾತನಾಡಿದ್ದ ರಮ್ಯಾ, ʼರೇಣುಕಾಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷಿ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆʼ ಎಂದು ಹೇಳಿದ್ದರು.
ಅಶ್ಲೀಲ ನಿಂದನೆಗಳ ಬಗ್ಗೆ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿಯಾಗಿ ರಮ್ಯಾ ದೂರು ದಾಖಲಿಸಿದ್ದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ʼಎಲ್ಲ ಹೆಣ್ಣುಮಕ್ಕಳ ಪರವಾಗಿ ದೂರು ಕೊಟ್ಟಿದ್ದೇನೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ದೂರು ನೀಡಿದ್ದೀನಿʼ ಎಂದು ಹೇಳಿದ್ದರು. ಇತ್ತ ಮಹಿಳಾ ಆಯೋಗವೂ ಅಶ್ಲೀಲವಾಗಿ ಸಂದೇಶ ಕಳಿಸಿದವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಕೊಳ್ಳಬೇಕು ಎಂದು ಕೋರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು.
ಇದನ್ನೂ ಓದಿ: Actress Ramya: ಇಂದು ಪ್ರಜ್ವಲ್ ರೇವಣ್ಣ ಶಿಕ್ಷೆಯ ಪ್ರಮಾಣ ಪ್ರಕಟ, ಕೋರ್ಟ್‌ಗೆ ವೆಲ್ ಡನ್ ಎಂದ ನಟಿ ರಮ್ಯಾ