ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Government Office Timings: ರಾಜ್ಯದಲ್ಲಿ ಭಾರಿ ಬಿಸಿಲು; ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

Rising temperature: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಬೇಸಿಗೆಯಲ್ಲಿ ಕಚೇರಿ ಕೆಲಸದ ಸಮಯದ ಬದಲಾವಣೆ ಮಾಡಲಾಗಿದೆ.

ಭಾರಿ ಬಿಸಿಲಿನ ಹಿನ್ನೆಲೆ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

Profile Prabhakara R Apr 2, 2025 10:08 PM

ಬೆಂಗಳೂರು: ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚುತ್ತಿರುವ (Rising temperature) ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಬೇಸಿಗೆಯಲ್ಲಿ (Summer) ಕಚೇರಿ ಕೆಲಸದ ಸಮಯದ ಬದಲಾವಣೆ ಮಾಡಲಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ (Government Office Timings) ಬದಲಾವಣೆ ಮಾಡಲಾಗಿದೆ.

ಕಚೇರಿ ಕೆಲಸದ ಸಮಯ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆಯಲ್ಲಿ ಯಾವ ಬಗೆಯ ಚರ್ಮದ ಆರೈಕೆ ಹೇಗಿರಬೇಕು?

ರಾಜ್ಯದೆಲ್ಲೆಡೆ ಮುಂದಿನ 5 ದಿನ ವರುಣನ ಆರ್ಭಟ ಜೋರು!

ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಗುಡುಗು ಸಹಿತ ಮಳೆಯಾಗಿದೆ. ಹಾಗೆಯೇ ಮುಂದಿನ ಐದು ದಿನ ರಾಜ್ಯದೆಲ್ಲೆಡೆ ವರುಣ (Karnataka Weather) ಆರ್ಭಟಿಸುವ ಸಾಧ್ಯತೆ ಇದೆ. ಏ. 3ರಂದು ಗುರುವಾರ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಏ. 4ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಚಿತ್ರದುರ್ಗ, ತುಮಕೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಏ. 5ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಮತ್ತು ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು ಮತ್ತು ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏ.6ರಂದು ಕರಾವಳಿಯ ಕರಾವಳಿಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಕೊಡಗು ಜಿಲ್ಲೆಗಳ ಹಲವು ಕಡೆಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ/ಗುಡುಗು ಸಹಿತ ಚದುರಿದ ಬೆಳಕಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ

ಏ.7ರಂದು ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Summer Health Tips: ಬೇಸಿಗೆಯಲ್ಲೇ ಹೊಟ್ಟೆಯ ಅನಾರೋಗ್ಯ ಕಾಡುವುದೇಕೆ?

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.