ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನಲ್ಲಿ ಅಪಘಾತ, 4 ಸಾವು -

ಹರೀಶ್‌ ಕೇರ
ಹರೀಶ್‌ ಕೇರ Jan 9, 2026 8:05 AM

ತುಮಕೂರು, ಜ.09: ತುಮಕೂರು (Tumakuru) ತಾಲೂಕು ಕೋರ ಬಳಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ನಾಲ್ಕು ಮಂದಿ ಅಯ್ಯಪ್ಪಸ್ವಾಮಿ (Ayyappa devotees) ಮಾಲಾಧಾರಿಗಳು ದುರ್ಮರಣ ಹೊಂದಿದ್ದಾರೆ. ಬೆಳಗಿನ ಜಾವ 4.45ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ನಿಂತಿದ್ದ ಲಾರಿಗೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ.

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರೆಲ್ಲಾ ಕೊಪ್ಪಳ ಮೂಲದವರಾಗಿದ್ದಾರೆ. ಇವರು ಅಯ್ಯಪ್ಪ ಮಾಲೆ ಧರಿಸಿದ್ದು, ಶಬರಿಮಲೆಗೆ ಹೊರಟಿದ್ದರು ಎಂದು ಊಹಿಸಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Road Accident: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ