ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Koratagere News: ಕೋಳಾಲ ಪ್ರಜಾ ಸೇವಾ ಅಭಿಯಾನ ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ

Koratagere News: ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಜರುಗಿತು. ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ ಮಾರ್ಗದರ್ಶನದಲ್ಲಿ ಕೋಳಾಲ ಗ್ರಾಮದಲ್ಲಿ ತಾಲೂಕು ಆಡಳಿತ ಪ್ರಜಾ ಸೇವಾ ಅಭಿಯಾನ ಮಾಡಲಾಗುತ್ತಿದ್ದು, ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದ್ದಾರೆ.

ಕೊರಟಗೆರೆ, ಸೆ.12: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಜನರ ಬಳಿಗೆ ಸರ್ಕಾರ, ಜನರಿಗಾಗಿ ಸರ್ಕಾರ ಎಂಬುದು ಪ್ರಜಾ ಸೇವಾ ಅಭಿಯಾನ ಪ್ರಾರಂಭವಾಗಿದ್ದು, ಸಾಕಷ್ಟು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ತಾಲೂಕಿನ (Koratagere News) ಕೋಳಾಲ ಗ್ರಾಮದ ಪಾರ್ವತಿ ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಅರ್ಜಿ ಸ್ವೀಕರಿಸಿ ಮಾತನಾಡಿದರು.

ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ ಮಾರ್ಗದರ್ಶನದಲ್ಲಿ ಕೋಳಾಲ ಗ್ರಾಮದಲ್ಲಿ ತಾಲ್ಲೂಕು ಆಡಳಿತ ಪ್ರಜಾ ಸೇವಾ ಅಭಿಯಾನ ಮಾಡಲಾಗುತ್ತಿದ್ದು, ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಖ್ಯವಾಗಿ ಭೂ ಮಾಪನ ಇಲಾಖೆಯ ತತ್ಕಾಲ್ ಪೋಡಿ, ದುರಸ್ಥಿ, ತಿದ್ದುಪಡಿ, ಆರ್.ಆರ್.ಟಿ ಆಗಿಲ್ಲ ಮತ್ತು 3-4 ತಿಂಗಳಿಂದ ದಿನಕ್ಕೆ 2 ಗಂಟೆಯಷ್ಟೇ ಪಂಪ್ ಸೆಟ್ ವಿದ್ಯುತ್ ನೀಡುತ್ತಿದ್ದು, ಹೆಚ್ಚಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ರೈತರು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ವಾಡಿಕೆಗಿಂದ 25ರಷ್ಟು ಮಳೆ ಕಡಿಮೆಯಾಗಿದ್ದು, ಜಿಲ್ಲೆಯ 10 ತಾಲೂಕುಗಳನ್ನು ಬರ ಘೋಷಣೆಯಾಗಿದೆ. 15 ಕೋಟಿ ಹಣ ಕುಡಿಯುವ ನೀರು ಹಾಗೂ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದೆ. ಬರದ ಪರಿಸ್ಥಿತಿ ನಿರ್ಮಾಣವಾಗಿರುವ ರಾಜ್ಯ ಸರ್ಕಾರ ಜಿಲ್ಲೆಗೆ 5 ಕೋಟಿ.ರೂ ನೀಡಿದ್ದು, ಇದನ್ನು ಕುಡಿಯುವ ನೀರು ನಿರ್ವಹಣೆಗೆ ಬಳಸಲಾಗುವುದು, ತುಮುಲ್ ವತಿಯಿಂದ ರೈತರಿಗೆ ಒಂದು ಲಕ್ಷದ ಎಂಪಿ ಮಿನಿ ಕಿಟ್ಸ್ ವಿತರಣೆ ಮಾಡಲಾಗುತ್ತಿದೆ, ಪಶು ಸಂಗೋಪನೆ ಇಲಾಖೆಯಿಂದ ರಾಜ್ಯಾದ್ಯಂತ ಹಸುಗಳಿಗೆ ಮಿನಿ ಕಿಟ್ಸ್ ವಿತರಿಸಲಾಗುತ್ತಿದೆ ಎಂದರು.

ಕೋಳಾಲಕ್ಕೆ 100 ಬೆಡ್ ಸಾಮರ್ಥ್ಯದ ಆಸ್ಪತ್ರೆ ಬೇಡಿಕೆ

ಕೋಳಾಲ ಹೋಬಳಿ ಕೇಂದ್ರಕ್ಕೆ 100 ಬೆಡ್ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ರೈತರಿಗೆ ವಿದ್ಯುತ್ ಸಮಸ್ಯೆ, ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಲು ಸರ್ವರ್ ಸಮಸ್ಯೆ, ಗೋಶಾಲೆ ಪ್ರಾರಂಭ, ತತ್ಕಾಲ್ ಪೋಡಿ, ಸೇರಿದಂತೆ 150ಕ್ಕೂ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರು ನೀಡಿದರು.

ಖಾಸಗಿ ಶಾಲೆ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡಲು ಸರ್ಕಾರ ಚಿಂತನೆ: ಸಚಿವ ಮಧು ಬಂಗಾರಪ್ಪ

ಸಭೆಯಲ್ಲಿ ಜಿ.ಪಂ ಸಿಇಒ ಬಿ.ವಿ ಆಶ್ವಿಜ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಶೋಕ್, ತಹಶೀಲ್ದಾರ್ ಮಂಜುನಾಥ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್ ಮೂರ್ತಿ, ತಾ.ಪಂ ಇಒ ಅಪೂರ್ವ, ಗಿರೀಶ್, ಕೆಂಪಣ್ಣ, ಮಾಜಿ ಅಧ್ಯಕ್ಷ ಗಿರೀಶ್, ಭದ್ರಣ್ಣ, ಚಂದ್ರು, ಅಧಿಕಾರಿಗಳಾದ ವೆಂಕಟೇಶ್, ವೆಂಕಟರಂಗನ್, ಮಧುಚಂದ್ರ, ಆರ್‌ಐ ಬಸವರಾಜು, ಪ್ರತಾಪ್, ಕೃಷ್ಣಮೂರ್ತಿ, ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.