Sira News: ಫುಡ್ ಪಾಯಿಸನ್; ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ
Sira News: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿಯಲ್ಲಿ ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಬುಧವಾರ ಘಟನೆ ನಡೆದಿದೆ. ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಕೊಡಿಸಲಾಗುತ್ತಿದೆ.
![ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ](https://cdn-vishwavani-prod.hindverse.com/media/original_images/Sira_News_1.jpg)
![Profile](https://vishwavani.news/static/img/user.png)
ಶಿರಾ: ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಲಕ್ಕನಹಳ್ಳಿಯಲ್ಲಿ ಬುಧವಾರ ನಡೆದಿದೆ. ತಕ್ಷಣವೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಫುಡ್ ಪಾಯಿಸನ್ ಕಾರಣದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಮಕ್ಕಳು ಅಸ್ವಸ್ಥರಾಗಿರುವ ವಿಚಾರ ತಿಳಿದು ಪೋಷಕರು ಆಸ್ಪತ್ರೆಗೆ ಧಾವಿಸಿದ್ದು, ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲೆಯ ಕೆಲವು ಸರಕಾರಿ ವಸತಿ ನಿಲಯಗಳಲ್ಲಿ ಆಹಾರ ಸಾಮಗ್ರಿಯನ್ನು ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಅವಧಿ ಮುಗಿದಿದ್ದರೂ ಆಹಾರ ಸಾಮಗ್ರಿ ಬಳಸುತ್ತಾರೆ. ಈ ಬಗ್ಗೆ ವಿದ್ಯಾರ್ಥಿ ನಿಲಯ ಪಾಲಕರು ಎಚ್ಚರಿಕೆ ವಹಿಸಬೇಕಾಗಿದೆ ಪೋಷಕರು ಆರೋಪಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Actor Vishal: ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್
ನಿಧಿ ಆಸೆಗಾಗಿ ನರ ಬಲಿ: ಜ್ಯೋತಿಷಿ ಸೇರಿ ಇಬ್ಬರು ಅರೆಸ್ಟ್
ಚಿತ್ರದುರ್ಗ: ನಿಧಿ ಆಸೆಗಾಗಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ರದುರ್ಗದ ಪರಶುರಾಂಪುರದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದೆ. ಈತ ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡುತ್ತಿದ್ದರು. ಆನಂದ ರೆಡ್ಡಿ (52) ಕೊಲೆಗೈದ ಆರೋಪಿಯಾಗಿದ್ದಾನೆ. ಆನಂದ ರೆಡ್ಡಿಗೆ ಪಾವಗಡದ ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ. ಅದರಂತೆ ಕೊಲೆ ಮಾಡುವ ಉದ್ದೇಶದಿಂದಲೇ ಆರೋಪಿ ಕರ್ನಾಟಕಕ್ಕೆ ಬಂದಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಪ್ರಭಾಕರ್‌ಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಆರೋಪಿಯ ಬೈಕ್ ಡೀಟೈಲ್ ಪ್ರಕಾರ ಆತನನ್ನು ಪತ್ತೆ ಮಾಡಲಾಗಿದೆ. ಮಚ್ಚು ಹಾಗೂ ಬಟ್ಟೆಯನ್ನು ಪೊಲಿಸರು ಸೀಜ್ ಮಾಡಿದ್ದಾರೆ. ಸದ್ಯ ಹಂತಕ ಹಾಗೂ ಜ್ಯೋತಿಷಿ ಇಬ್ಬರೂ ಪೊಲೀಸರ ಅತಿಥಿಯಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವಾಗ ಹೃದಯಾಘಾತವಾಗಿ ಶಿರಾ ಮೂಲದ ವ್ಯಕ್ತಿ ಸಾವು
ಶಿರಾ: ತಾಲೂಕಿನ ಭಕ್ತರೊಬ್ಬರು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಶಿರಾ ತಾಲೂಕಿನ ಬರಗೂರು ಗ್ರಾಮದ ನಾಗರಾಜು (57) ಮೃತರು ಎಂದು ತಿಳಿದು ಬಂದಿದೆ. ಪ್ರಯಾಗ್ ರಾಜ್‌ನಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ನಾಗರಾಜು ಬರಗೂರಿನ ಎಲ್‌ಎನ್‌ಪಿ ಬ್ರಿಕ್ಸ್‌ನ ಮಾಲೀಕರಾಗಿದ್ದಾರೆ. ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಎಲ್ಲಾ ರೀತಿಯ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಿಲ್ಲೆಯಿಂದ ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ಸಹಸ್ರಾರು ಭಕ್ತರು ತೆರಳಿದ್ದಾರೆ. ಈ ರೀತಿ ಅವಘಡ ಸಂಭವಿಸಿರುವುದು ಇದೇ ಮೊದಲು.
ಈ ಸುದ್ದಿಯನ್ನೂ ಓದಿ | Maha Kumbh Mela 2025: ಕುಂಭ, ಗಂಗಾ, ಯಮುನಾ, ಸರಸ್ವತಿ...ಮಹಾ ಕುಂಭಮೇಳದ ವೇಳೆ ಪ್ರಯಾಗ್‌ರಾಜ್‌ನಲ್ಲಿ 12 ಶಿಶುಗಳ ಜನನ
ಇತ್ತೀಚೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ಬೆಳಗಾವಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಅದೇ ರೀತಿ ಕಾಶಿಯಲ್ಲಿ ಸ್ನಾನ ಮಾಡುವ ವೇಳೆ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮೊದಲು ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರು ಮೃತಪಟ್ಟಿದ್ದರು. ಇದೀಗ ಶಿರಾ ಮೂಲದ ವ್ಯಕ್ಯಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.