Tumkur News: ಲೋ ಬಿಪಿಯಿಂದ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!
Pavagada News: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
-
ತುಮಕೂರು: ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Student Death) ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಾಂಕಾ (14) ಮೃತ ಬಾಲಕಿ. ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ.
ಕಾರಗಾನಹಟ್ಟಿ ಗ್ರಾಮದ ನರಸಿಂಹ ಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ ಪ್ರಿಯಾಂಕಾ, ತ್ರಯಂಬಕೇಶ್ವರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಒಂದು ವಾರದಿಂದ ಅನಾರೋಗ್ಯ ಕಾರಣಕ್ಕೆ ಊರಿಗೆ ತೆರಳಿದ್ದಳು. ಬಳಿಕ ಆಗಸ್ಟ್ 7 ರಂದು ಮತ್ತೆ ಹಾಸ್ಟೆಲ್‌ಗೆ ವಾಪಸ್ ಆಗಿದ್ದಳು.
ನಿನ್ನೆ ಬೆಳಗ್ಗೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಬಾಲಕಿ ಅಸ್ವಸ್ಥಗೊಂಡು, ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಳು. ತಕ್ಷಣ ಆಕೆಯನ್ನು ಹಾಸ್ಟೆಲ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಸ್ಪತ್ರೆಗೆ ಬಾಲಕಿಯನ್ನು ಕರೆತರುವ ಮುನ್ನವೇ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ್ದ ಪಾವಗಡ ಗ್ರಾಮಾಂತರ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿವಿ ವಿದ್ಯಾರ್ಥಿನಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ (Manasa) ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30 ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
Shivagange Hill: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಉದ್ಯಮಿಯ ಮಗ ನಾಪತ್ತೆ; ಪೊಲೀಸರಿಂದ ಶೋಧಕಾರ್ಯ
ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ಒದಗಿಸಿದೆ.