ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಟಿ ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಅನುಚಿತ ವರ್ತನೆ ತೋರಿದ ಅಭಿಮಾನಿ: ಗರಂ ಆದ 'ಡಿಂಪಲ್ ಕ್ವೀನ್'

Rachita Ram: ಸ್ಯಾಂಡಲ್‌ವುಡ್ ಜನಪ್ರಿಯ ನಟಿ 'ಡಿಂಪಲ್ ಕ್ವೀನ್' ರಚಿತಾ ರಾಮ್ ಅವರೊಂದಿಗೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ತುಮಕೂರಿನಲ್ಲಿ ಜರುಗಿದೆ. ತುಮಕೂರು ದಸರಾ ಮಹೋತ್ಸವದ ವೇದಿಕೆಯಲ್ಲಿ ನಟಿಯ ಯಾವುದೇ ಪೂರ್ವಾನುಮತಿಯಿಲ್ಲದೆ ಅವರ ಹೆಗಲ ಮೇಲೆ ಕೈಹಾಕಿ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿ, ಅನುಚಿತ ವರ್ತನೆ ತೋರಿಸಿದ್ದಾನೆ.

ನಟಿ ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಅಭಿಮಾನಿಯ ಅನುಚಿತ ವರ್ತನೆ

-

Profile
Siddalinga Swamy Oct 20, 2026 5:07 PM

ತುಮಕೂರು: ತುಮಕೂರು ದಸರಾ ಮಹೋತ್ಸವದ ವೇದಿಕೆಯಲ್ಲಿ ಸ್ಯಾಂಡಲ್‌ವುಡ್ ಜನಪ್ರಿಯ ನಟಿ 'ಡಿಂಪಲ್ ಕ್ವೀನ್' ರಚಿತಾ ರಾಮ್ (Rachita Ram) ಅವರೊಂದಿಗೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. ನಟಿಯ ಯಾವುದೇ ಪೂರ್ವಾನುಮತಿಯಿಲ್ಲದೆ ಅವರ ಹೆಗಲ ಮೇಲೆ ಕೈಹಾಕಿ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ.

ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಗೆ ಆಗಮಿಸಿದ್ದ ನಟಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ಅಭಿಮಾನಿಯೊಬ್ಬ, ಭದ್ರತಾ ಸಿಬ್ಬಂದಿಯ ಕಣ್ಣುತಪ್ಪಿಸಿ ನೇರವಾಗಿ ವೇದಿಕೆ ಹತ್ತಿದ್ದಾನೆ. ನಟಿಯ ಯಾವುದೇ ಪೂರ್ವಾನುಮತಿಯಿಲ್ಲದೆ ಅವರ ಹೆಗಲ ಮೇಲೆ ಕೈಹಾಕಿ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ಅನಿರೀಕ್ಷಿತ ಹಾಗೂ ಅತಿರೇಕದ ವರ್ತನೆಯಿಂದ ವಿಚಲಿತರಾದ ನಟಿ ರಚಿತಾ ರಾಮ್, ಕೂಡಲೇ ಆ ಅಭಿಮಾನಿಯ ನಡೆಗೆ ತೀವ್ರ ಅಸಮಾಧಾನಗೊಂಡು ಗರಂ ಆಗಿದ್ದಾರೆ.

ತಕ್ಷಣವೇ ಎಚ್ಚೆತ್ತ ಬೌನ್ಸರ್‌ಗಳು ಹಾಗೂ ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ, ಆತನನ್ನು ವೇದಿಕೆಯಿಂದ ಕೆಳಗೆ ಕಳುಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸೆಲ್ಫಿ ಕ್ರೇಜ್ ಹೆಚ್ಚಾಗಿರುವ ಇಂತಹ ಸಾರ್ವಜನಿಕ ಸಂದರ್ಭಗಳಲ್ಲಿ ಸೆಲೆಬ್ರಿಟಿಗಳ ವೈಯಕ್ತಿಕ ಭದ್ರತೆ ಮತ್ತು ಗೌರವಕ್ಕೆ ಧಕ್ಕೆಯಾಗುತ್ತಿರುವುದು ಈ ಘಟನೆಯಿಂದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.