ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tumkur News: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ!

ಸಿಎಂ ಆದೇಶ ಮಾಡಿದರೂ ನನಗೆ ನಿವೇಶನ ಕೊಟ್ಟಿಲ್ಲ ಎಂದು ದಯಾಮರಣ ಕೋರಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದ ಮಹಿಳೆ, ತುಮಕೂರು ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

-

Prabhakara R
Prabhakara R Aug 27, 2026 10:55 PM

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು (Tumkur) ಜಿಲ್ಲೆ ಶಿರಾ ನಗರದ ಹೊರವಲಯದಲ್ಲಿ ನಡೆದಿದೆ. ತಾಯಿ ರಾಬಿಯಾ ಪಾಷಾ (39), ಮಗಳು ತಮನ್ನಾ (9), ಮಗ ಸಿಮ್ರಾನ್ (5) ಮೃತರು.

ಘಟನೆ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್ಪಿ ಅಶೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 2025ರಲ್ಲಿ ತುಮಕೂರಿನಲ್ಲಿ ನಡೆದ ಸರ್ಕಾರದ ವಿವಿಧ ಸವಲತ್ತು ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಂದಿದ್ದ ಅಂದಿನ ಸಿಎಂ ಸಿದ್ದರಾಮಯ್ಯರ ಬಳಿ ರಾಬಿಯಾ ತನ್ನ ಮನವಿ ಆಲಿಸುವಂತೆ ಹೋರಾಟ ನಡೆಸಿದ್ದರು. ರಾಬಿಯಾ ಮನವಿಗೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ 20/30 ನಿವೇಶನ ಮಂಜೂರು ಮಾಡಿದ್ದರು.

ಸಿಎಂ ಆದೇಶ ನೀಡಿ ಒಂದೂವರೆ ವರ್ಷ ಕಳೆದಿದ್ದರೂ ನಿವೇಶನ ನೀಡದೆ ಅಧಿಕಾರಿಗಳು ಸತಾಯಿಸಿದ್ದರು. ಇದರಿಂದ ರೋಸಿಹೋದ ರಾಬಿಯಾ ಅಂದಿನ ಗೃಹಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆದ ಜನಸ್ಪಂದನ ಸಭೆಯಲ್ಲೂ ರಂಪಾಟ ಮಾಡಿದ್ದರು. ಸಿಎಂ ಆದೇಶ ಮಾಡಿದರೂ ನನಗೆ ನಿವೇಶನ ಕೊಟ್ಟಿಲ್ಲ ಎಂದು ದಯಾಮರಣ ಕೋರಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದರು. ಇದೀಗ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.