ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Tiptur News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ತಿಪಟೂರಿನಲ್ಲಿ ಎಬಿವಿಪಿ ಪ್ರತಿಭಟನೆ

Tiptur News: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ಶನಿವಾರ ತಿಪಟೂರು ನಗರದ ಐಬಿ ಸರ್ಕಲ್ ಬಳಿ ನೂರಾರು ವಿದ್ಯಾರ್ಥಿಗಳೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಿಪಟೂರಿನಲ್ಲಿ ಎಬಿವಿಪಿ ಪ್ರತಿಭಟನೆ -

Profile
Siddalinga Swamy Jul 25, 2026 5:22 PM

ತಿಪಟೂರು, ಜು.25: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ (ABVP) ನೇತೃತ್ವದಲ್ಲಿ ಶನಿವಾರ ತಿಪಟೂರು ನಗರದ (Tiptur News) ಐಬಿ ಸರ್ಕಲ್ ಬಳಿ ನೂರಾರು ವಿದ್ಯಾರ್ಥಿಗಳೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಗುರುಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸರಿಯಾದ ಸಮಯಕ್ಕೆ ಸರ್ಕಾರಿ ಬಸ್ಸುಗಳು ಆಗಮಿಸುತ್ತಿಲ್ಲ, ಹಾಸ್ಟೆಲ್‌ಗಳಲ್ಲಿ ಹುಳು ಮಿಶ್ರಿತ ಆಹಾರವನ್ನು ನೀಡುತ್ತಿದ್ದಾರೆ, ಬಡ ಮಕ್ಕಳಿಗೆ ಬರುತ್ತಿದ್ದ ಸ್ಕಾಲರ್‌ಶಿಪ್ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕೂಡಲೆ ಹೆಚ್ಚುವರಿ ಸರ್ಕಾರಿ ಬಸ್ಸುಗಳನ್ನು ವಿದ್ಯಾರ್ಥಿಗಳ ಶಾಲಾ- ಕಾಲೇಜು ಸಮಯಕ್ಕೆ ಸರಿಯಾಗಿ ಬಿಡಬೇಕು. ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಇಲ್ಲದಿದ್ದಲ್ಲಿ ಉಪವಾಸ ಧರಣಿ ಹಮ್ಮಿಕೊಳ್ಳಲಾಗುವುದು. ಕೂಡಲೇ ಬಡ ಮಕ್ಕಳಿಗೆ ಅನುಕೂಲವಾಗಲು ನೀಡುತ್ತಿದ್ದ ಸ್ಕಾಲರ್‌ಶಿಪ್ ಅನ್ನು ಬಿಡುಗಡೆಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.‌

ನಾಳೆ ಬೆಂಗಳೂರಿನಲ್ಲಿ ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಅನವಶ್ಯಕವಾಗಿ ತಮ್ಮ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲವು ನಾಯಕರು ಮುಂದಾಗಿರುವುದನ್ನು ಎಬಿವಿಪಿ ಖಂಡಿಸುತ್ತದೆ. ಪ್ರತಿಭಟನೆ ಹೆಸರಿನಲ್ಲಿ ದೇಶ ಒಡೆಯುವ ಹುನ್ನಾರ ನಡೆಸುತ್ತಿದ್ದಾರೆ, ದೇಶ ವಿಭಜಿಸುವ ಸಂದರ್ಭ ಬಂದರೆ ಎಬಿವಿಪಿ ಕಾರ್ಯಕರ್ತರು, ಸದಸ್ಯರು ಸೇರಿದಂತೆ ಎಬಿವಿಪಿಯ ದೇಶದ ಪರವಾಗಿ ನಿಲ್ಲುತ್ತದೆ ಎಂದು ಎಬಿವಿಪಿ ಮುಖಂಡ ಗುರುಪ್ರಸಾದ್ ತಿಳಿಸಿದರು.