ಪಾವಗಡ, ಜ.21: ತಾಲೂಕಿನ ಗುಜ್ಜನಡು ಗ್ರಾಮದಲ್ಲಿ (Pavagada News) ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ, ಶ್ರೀ ಲಕ್ಷ್ಮಿ ವೆಂಕಟೇಶ್ವರ ಹಾಗೂ ಶಿರಡಿ ಸಾಯಿಬಾಬಾ ನೂತನ ದೇವಾಲಯದ ಭೂಮಿ ಪೂಜೆ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳಿಂದ ಭಾನುವಾರ ನೆರವೇರಿತು.
ಮಹಾಲಕ್ಷ್ಮಿ ಲೇಔಟ್ ಶಾಸಕ, ಮಾಜಿ ಸಚಿವ ಗೋಪಾಲಯ್ಯ ಕಾರ್ಯಕ್ರಮದಲ್ಲಿ ಮಾತನಾಡಿ, ಗುಜ್ಜನಡು ಗ್ರಾಮ ಮಾದರಿಯಾಗಬೇಕು. ಸುಮಾರು 30 ಕೋಟಿ ವೆಚ್ಚದಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ದೇವಸ್ಥಾನ ಹಾಗೂ ಗ್ರಾಮದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ರಾಜೇಶ್ ಗೌಡ ಕಾರ್ಯಕ್ರಮದಲ್ಲಿ ಮಾತನಾಡಿ, ಚಿತ್ರದುರ್ಗ, ನಿಡಗಲ್, ಶಿರಾ ಹಾಗೂ ಗುಜ್ಜನಡು ಗ್ರಾಮಗಳ ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿ, ಇಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ಸಂಸ್ಕಾರ ಮತ್ತು ಇತಿಹಾಸವನ್ನು ತಿಳಿಸುವಲ್ಲಿ ಮಹತ್ವದ್ದಾಗಿವೆ ಎಂದರು. ಕಾರ್ಯಕ್ರಮದಲ್ಲಿ ವಕೀಲ ಎ.ಪಿ. ರಂಗನಾಥ್ ಮಾತನಾಡಿ, ಈ ಪ್ರದೇಶದ ಸಾಂಸ್ಕೃತಿಕ ಹಿನ್ನಲೆಯನ್ನು ವಿವರಿಸಿದರು.
ಬಳಿಕ ಇತಿಹಾಸ ತಜ್ಞ ಸಣ್ಣ ನಾಗಪ್ಪ ಮಾತನಾಡಿ, ರಾಜ್ಯಕ್ಕೆ ಮಾದರಿಯಾಗುವಂತೆ ಈ ಕಾರ್ಯ ತ್ವರಿತವಾಗಿ ಪೂರ್ಣಗೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಮಧುಗಿರಿಯ ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ; ಜ.22 ರಿಂದ ಫೆ. 4 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯವಾದಿ ಹನುಮಂತರಾಯಪ್ಪ. ಡಾ. ಕಿರಣ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಮೂಟೆ ಹನುಮಂತರಾಯಪ್ಪ, ಸಮಾಜ ಸೇವಕಿ ಸಾಯಿಸುಮನ್ ಹನುಮಂತಪ್ಪ. ಕೆ. ರಾಮಣ್ಣ, ಕದಿರೇಹಳ್ಳಿ ಜಗನ್ನಾಥ, ದಾಸೇಗೌಡ, ನರಸಿಂಹಮೂರ್ತಿ, ಸ್ಪಂದನ ನಸ್ರಿ, ಡಾ. ಮಹೇಶ್, ನಾಗಪ್ಪ, ನಿವೃತ್ತ ಸಬ್ ರಿಜಿಸ್ಟ್ರಾರ್ ರಾಮಣ್ಣ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ಮೂಡ್ಲಿಗಿರಿಯಪ್ಪ, ಶಿಕ್ಷಕ ಶ್ರೀನಿವಾಸ್ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ನಾಲ್ಕು ಗ್ರಾಮಗಳ ಪ್ರಮುಖರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.