Tumkur News: ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ
ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದ್ದು, ಬಾಂಬ್ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಗಮನಿಸಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಹಾಗೂ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು ಡಿಸಿ ಕಚೇರಿಯಲ್ಲಿ ಬಾಂಬ್ ಸ್ಕ್ವಾಡ್ ತಪಾಸಣೆ. -
ತುಮಕೂರು: ಮಂಗಳೂರು ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ತುಮಕೂರು ಡಿಸಿ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಗಳವಾರ ಬೆಳಗ್ಗೆ 6.59ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ.
ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದ್ದು, ಬಾಂಬ್ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಗಮನಿಸಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸಿಬ್ಬಂದಿ ಸೇರಿ ಸುಮಾರು 100 ಮಂದಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಒಳಗಡೆ ಸಾರ್ವಜನಿಕರನ್ನು ಬಿಡದೆ ತಪಾಸಣೆ ಕೈಗೊಳ್ಳಲಾಗಿದೆ.
ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಕಚೇರಿ ಮತ್ತು ಆಸುಪಾಸಿನಲ್ಲಿ ಶೋಧ ಕಾರ್ಯ ನಡೆದಿದ್ದು, ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
Bondi beach shooting: ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ ನಡೆಸಿದ ಉಗ್ರರು ಭಾರತೀಯರೇ? ವರದಿ ಹೇಳಿದ್ದೇನು?
ಮಂಗಳೂರಿನ ಆರ್‌ಟಿಒ ಕಚೇರಿ, ಗದಗ ಜಿಲ್ಲಾಡಳಿತ ಭವನಕ್ಕೂ ಬಾಂಬ್ ಬೆದರಿಕೆ!
ಗದಗ: ಮಂಗಳೂರಿನ ಆರ್‌ಟಿಒ ಕಚೇರಿ ಮತ್ತು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸೋಮವಾರ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಇದರಿಂದ ಎರಡೂ ಸ್ಥಳಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು.
ಮಂಗಳೂರಿನ ನೆಹರು ಮೈದಾನದಲ್ಲಿರುವ ಆರ್‌ಟಿಒ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಇನ್ನು 5 ಬಾಂಬ್‌ಗಳಿಂದ ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಸಂದೇಶ ಬಂದಿದ್ದರಿಂದ ಸಿಬ್ಬಂದಿ ಕಂಗಾಲಾಗಿದ್ದರು. ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಡಿಸಿ ಕಚೇರಿ ಇಮೇಲ್-ಗೆ ಬೆದರಿಕೆ ಬಂದಿತ್ತು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದರು.
ಪಾರ್ಟಿಗೆ ದಾಳಿ ಮಾಡಿ ಹಣ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ
ಗದಗ ಜಿಲ್ಲಾಡಳಿತದ ಅಧಿಕೃತ ಇಮೇಲ್‌ಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂದೇಶ ಬಂದಿತ್ತು. ಜಿಲ್ಲಾಧಿಕಾರಿ ಕಚೇರಿಯ ಐದು ಕಡೆಗಳಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಬಂದಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಾಂಬ್ ಸ್ಕ್ಯಾಡ್, ಶ್ವಾನ ದಳ, ASC ಟೀಮ್ ದೌಡಾಯಿಸಿ, ಪರಿಶೀಲನೆ ನಡೆಸಿತ್ತು.