ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ; ಪುತ್ರಿ ಪರವಾಗಿ ಕ್ಷಮೆ ಕೇಳಿದ BJP ಶಾಸಕ ಸುರೇಶ್‌ ಗೌಡ

MLA B. Suresh Gowda: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ  BJP ಶಾಸಕ ಸುರೇಶ್‌ ಗೌಡ ಪುತ್ರಿ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 14, 2026 1:53 PM

ತುಮಕೂರು: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ (Aishwarya) ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ (B. Suresh Gowda) ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಸಬ್ ಇನ್‌ಸ್ಪೆಕ್ಟರ್ ಅವಳನ್ನು ಒಳಗೆ ಬಿಡಲಿಲ್ಲ. ವಿಐಪಿ ಸಾಲಿನಲ್ಲಿ ನಿಂತಿದ್ದಾಗ ಬೇರೆಯವರನ್ನು ಒಳಗಡೆ ಬಿಟ್ಟಿದ್ದರು. ಕ್ರಿಯೆಗೆ ಪ್ರತಿಕ್ರಿಯೆ ಸಹಜವಾಗಿ ಇರುತ್ತದೆ. ಮಾತಿಗೆ ಮಾತು ಬೆಳೆದು ಈ ಅಹಿತಕರ ಘಟನೆ ನಡೆದಿರಬಹುದು. ಸ್ಥಳದಲ್ಲಿ ವಾಸ್ತವವಾಗಿ ಏನು ನಡೆಯಿತು ಎಂಬುದು ನನಗೆ ಪೂರ್ಣವಾಗಿ ತಿಳಿದಿಲ್ಲ ಎಂದು ಹೇಳಿದ್ದಾರೆ.

ಮುಂದುವರಿದು, ಘಟನೆಯಲ್ಲಿ ನನ್ನ ಮಗಳ ಕಡೆಯ ದೂರು ಏನಿತ್ತು ಎಂಬುದನ್ನೂ ಪೊಲೀಸರು ಆಲಿಸಬೇಕಿತ್ತು. ಈ ಸಂಬಂಧ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನನ್ನ ಮಗಳದ್ದು ತಪ್ಪಿದ್ದರೆ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳಲು ಸಿದ್ಧ. ಅವಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ ನಾವು ಸಾರ್ವಜನಿಕ ಜೀವನದಲ್ಲಿರುವವರು, ಈ ರೀತಿ ಎಂದಿಗೂ ನಡೆದುಕೊಳ್ಳಬಾರದು. ಹೀಗಾಗಿ ನನ್ನ ಮಗಳ ವರ್ತನೆಗಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ ಎಂದು ಸುರೇಶ್‌ ಗೌಡ ಹೇಳಿದ್ದಾರೆ.

ಏನಿದು ಘಟನೆ?

ಆಗಸ್ಟ್ 12ರಂದು ರಾತ್ರಿ ಸುಮಾರು 8.15ರ ವೇಳೆಗೆ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ಕರ್ತವ್ಯಕ್ಕೆ ಮಂಡ್ಯ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಸವಿತಾ ಬಿ. ಪಾಟೀಲ್ ಅವರನ್ನು ನಿಯೋಜಿಸಲಾಗಿತ್ತು. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್‌ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

ಕ್ಲುಲಕ ಕಾರಣಕ್ಕೆ ಭಿಕ್ಷುಕಿಯ ಮೇಲೆ ಅಮಾನವೀಯ ಹಲ್ಲೆ ಎಸಗಿದ ಅಂಗಡಿ ಮಾಲೀಕ: ಕಠಿಣ ಕ್ರಮ ಕೈಗೊಳ್ಳಲು ನೆಟ್ಟಿಗರ ಆಗ್ರಹ!

ಈ ವೇಳೆ ಐಶ್ವರ್ಯ ಅವರು ಪಿಎಸ್‌ಐ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು, ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್‌ 132, 115(2), 352 ಮತ್ತು 351(2) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದು ಬಂದಿದೆ.