ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ; ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ಗೌಡ (B Suresh Gowda) ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಐಶ್ವರ್ಯ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗಲಾಟೆ ನಡೆದಿತ್ತು.

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌; ಕ್ಷಮೆಯಾಚಿಸಿದ ಐಶ್ವರ್ಯ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 22, 2026 12:02 PM

ತುಮಕೂರು: ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ ಸಂಬಂಧ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ಗೌಡ (B Suresh Gowda) ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಐಶ್ವರ್ಯ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಸವಿತಾ ಜೊತೆ ಕಿರಿಕ್‌ ಮಾಡಿಕೊಂಡಿದ್ದರು.

ಜಗಳ ಮುಂದಿನ ಹಂತಕ್ಕೆ ತಲುಪಿ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷಮೆ ಕೋರಲು ಕೋರ್ಟ್ ತಾಕೀತು ಹಿನ್ನೆಲೆ ಐಶ್ವರ್ಯಗೌಡ ಬಹಿರಂಗ ಕ್ಷಮೆಕೋರಿದ್ದಾರೆ. ಆಗಸ್ಟ್ 12ರಂದು ಭೀಮನ ಅಮಾವಾಸ್ಯೆಯಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ `ಅಮ್ಮ’ ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್‌ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು.

ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ಐಶ್ವರ್ಯ ವಿಡಯೋದಲ್ಲಿ ಹೇಳಿದ್ದಾರೆ.

ಘಟನೆ ಬಳಿಕ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ಘಟನೆಯ ಸಂದರ್ಭದಲ್ಲಿ ನಿಖರವಾಗಿ ಏನು ನಡೆದಿದೆ ಎಂಬುದು ತಮ್ಮ ಗಮನಕ್ಕೆ ಸಂಪೂರ್ಣವಾಗಿ ಬಂದಿಲ್ಲ. ತಮ್ಮ ಮಗಳ ಕಡೆಯಿಂದಲೂ ಏನಾಯಿತು ಎಂಬುದನ್ನು ಪೊಲೀಸರು ಆಲಿಸಬೇಕಿತ್ತು.ನನ್ನ ಮಗಳದ್ದು ತಪ್ಪಿದ್ದರೆ, ನಾನು ಸಾರ್ವಜನಿಕವಾಗಿ ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆಕೆ ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ, ನಾವು ಸಾರ್ವಜನಿಕ ಜೀವನದಲ್ಲಿರುವವರು. ಈ ರೀತಿಯ ವರ್ತನೆ ಯಾವುದೇ ಕಾರಣಕ್ಕೂ ಸರಿಯಲ್ಲ. ಹೀಗಾಗಿ ನನ್ನ ಮಗಳ ವರ್ತನೆಗಾಗಿ ನಾನೇ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆಂದು ಎಂದು ಹೇಳಿದ್ದರು.