Chikkabalapur News: ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆ ಲೋಪದೋಷವಾಗದಂತೆ ನಡೆಸಲು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಸೂಚನೆ
ಜನವರಿ ೧೯ ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಯನ್ನು ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನದಲ್ಲಿ ೧೨ ಪರೀಕ್ಷಾ ಕೇಂದ್ರಗಳಲ್ಲಿ ೪,೪೯೯ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯ ಲಿದ್ದಾರೆ ಮತ್ತು ಜನವರಿ ೨೫ ರಂದು ನಿರ್ದಿಷ್ಟ ಪತ್ರಿಕೆ ಪರೀಕ್ಷೆಯನ್ನು ಜಿಲ್ಲಾ ಕೇಂದ್ರದ ೧೨ ಪರೀಕ್ಷಾ ಕೇಂದ್ರಗಳಲ್ಲಿ ೪,೪೯೯ ವಿದ್ಯಾರ್ಥಿಗಳು ಬರೆಯಲಿದ್ದಾರೆ
Source : Chikkaballapur Reporter
ಚಿಕ್ಕಬಳ್ಳಾಪುರ : "ವಿವಿಧ ಇಲಾಖೆಗಳ ಗ್ರೂಪ್-ಬಿ ಮೂಲ ವೃಂದದಲ್ಲಿ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯು ಇದೇ ಜನವರಿ ಮಾಹೆಯ 19 ಮತ್ತು 25 ರಂದು ರಾಜ್ಯಾದ್ಯಂತ ನಡೆಯುತ್ತಿದ್ದು, ಸದರಿ ಪರೀಕ್ಷೆಯು ಜಿಲ್ಲೆಯಲ್ಲಿಯೂ ಯಾವುದೇ ಲೋಪ ದೋಷವಾಗದಂತೆ ಸುಗಮವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ನಿಗಾ ವಹಿಸಿ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಪರೀಕ್ಷಾ ಕರ್ತವ್ಯಕ್ಕೆ ನೇಮಿಸ ಲ್ಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ "ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನವರಿ 19 ರಂದು ನಡೆಯುವ ಸಾಮಾನ್ಯ ಪತ್ರಿಕೆ ಪರೀಕ್ಷೆಯನ್ನು ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನದಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ 4499 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯ ಲಿದ್ದಾರೆ ಮತ್ತು ಜನವರಿ ೨೫ ರಂದು ನಿರ್ದಿಷ್ಟ ಪತ್ರಿಕೆ ಪರೀಕ್ಷೆಯನ್ನು ಜಿಲ್ಲಾ ಕೇಂದ್ರದ 12 ಪರೀಕ್ಷಾ ಕೇಂದ್ರಗಳಲ್ಲಿ 4499 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಕೊಠಡಿಗಳ ಸ್ವಚ್ಚತೆ, ಗಾಳಿಯ ವ್ಯವಸ್ಥೆ, ಶೌಚಾ ಲಯ, ಸುಸ್ಥಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳು ವ್ಯವಸ್ಥೆ ಯಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ಕರ್ತವ್ಯಕ್ಕೆ ನೇಮಿಸಲ್ಪಟ್ಟ ಸಂಬಂಧಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳ ಸುಸ್ಥಿತಿಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು. ಪರೀಕ್ಷಾ ದಿನ ದಂದು ಸಂವೀಕ್ಷಕರಿಗೆ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್ ಉತ್ತರ ಹಾಳೆಗಳು ವಿತರಣೆ ಯಾಗಿರುವುದನ್ನು ಖಾತರಿ ಪಡಿಸಿಕೊಳ್ಳುವುದು ಹಾಗೂ ಕರ್ನಾಟಕ ಲೋಕಸೇವಾ ಆಯೋಗವು ನೀಡಲಾದ ಪರೀಕ್ಷೆಗೆ ಸಂಬAಧಿಸಿದ ಸಮಯ ಪಾಲನೆ ಹಾಗೂ ನಿರ್ದೇಶನ ಗಳನ್ನು ನಿಖರವಾಗಿ ಪಾಲಿಸಬೇಕು. ಪರೀಕ್ಷೆಯನ್ನು ಗೌಪ್ಯತೆಯಿಂದಲೂ, ನಿಯಮಬದ್ಧ ವಾದ ನಿರ್ವಹಣೆಯಿಂದಲೂ ಕೈಗೊಂಡು ಪರೀಕ್ಷಾ ದಕ್ಷತೆಯನ್ನು ಕಾಪಾಡಬೇಕು ಎಂದರು.
ಪರೀಕ್ಷಾ ದಿನದಂದು ಮಾರ್ಗಾಧಿಕಾರಿಗಳ ತಂಡದ ಬೆಂಗಾವಲಿಗೆ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸ ಬೇಕು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶ ವನ್ನು ಸಾರ್ವಜನಿಕ ನಿಷೇಧಿತವಾಗಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮವಹಿಸಬೇಕು.
ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಫ್ರಿಸ್ಕಿಂಗ್ ಮಾಡಿಸತಕ್ಕದ್ದು, ಹಾಗೂ ಪರೀಕ್ಷಾರ್ಥಿಗಳು ಕೊಠಡಿಯೊಳಗೆ ಮೊಬೈಲ್ ಫೋನ್ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಬರಬಾ ರದು, ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಅಭ್ಯರ್ಥಿಗಳು ಪಾಲಿಸ ಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ಪೊಲೀಸ್ ವರಿಷ್ಟಾಧಿಕಾರಿ ಶಿವ ಕುಮಾರ್, ವಿಷಯ ಪರೀವಿಕ್ಷಕ ಜಮೀರ್ ಪಾಷ, ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.