ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಳಗ್ಗೆ 10 ಗಂಟೆಯೊಳಗೆ ಸಿಬ್ಬಂದಿ ಹಾಜರಿರಬೇಕು, ಗುರುತಿನ ಚೀಟಿ ಕಡ್ಡಾಯ: ಚಿಕ್ಕನಾಯಕನಹಳ್ಳಿ ತಾಪಂನೂತನ ಇಒ ಶಿವರಾಜಯ್ಯ ಖಡಕ್ ಸೂಚನೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಕಚೇರಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದ ಅವಧಿಯಲ್ಲಿ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಾಲೂಕು ಪಂಚಾಯಿತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿಯ ನೂತನ ಇಒ ಶಿವರಾಜಯ್ಯ.

ಚಿಕ್ಕನಾಯಕನಹಳ್ಳಿ, ಜೂ.9: ತಾಲೂಕು ಪಂಚಾಯಿತಿ ಕಚೇರಿಯ (Chikkanayakanahalli News) ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಬೆಳಿಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಅಲ್ಲದೆ, ಕರ್ತವ್ಯದ ಅವಧಿಯಲ್ಲಿ ಸರ್ಕಾರ ನೀಡಿರುವ ಅಧಿಕೃತ ಗುರುತಿನ ಚೀಟಿಯನ್ನು (Identity Card) ಕಡ್ಡಾಯವಾಗಿ ಧರಿಸಿರಬೇಕು ಎಂದು ತಾಲೂಕು ಪಂಚಾಯಿತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಶಿವರಾಜಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿಯ ನೂತನ ಇಒ ಆಗಿ ಅಧಿಕಾರ ಸ್ವೀಕರಿಸಿದ ನಂತರ ಕಚೇರಿ ಸಿಬ್ಬಂದಿಗಳೊಂದಿಗೆ ಹಮ್ಮಿಕೊಂಡಿದ್ದ ಮೊದಲ ಸಭೆಯಲ್ಲಿ ಅವರು ಮಾತನಾಡಿದರು.

ಕಚೇರಿಗೆ ಬರುವ ಸಾರ್ವಜನಿಕರಿಗೆ ಗುರುತಿನ ಚೀಟಿ ಧರಿಸುವುದರಿಂದ ಅಧಿಕಾರಿಗಳನ್ನು ಗುರುತಿಸಲು ಸುಲಭವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಸರ್ಕಾರದ ನಿಯಮಾವಳಿಗಳನ್ನು ಪಾಲಿಸಲೇಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ತೋರಿದರೆ ಅಥವಾ ಶಿಸ್ತು ಉಲ್ಲಂಘಿಸಿದರೆ ಅಂತಹ ಸಿಬ್ಬಂದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.‌

BESCOM Online Services: ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ತಾಲೂಕಿನ ಪ್ರಗತಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಒಟ್ಟಾಗಿ, ಪಾರದರ್ಶಕವಾಗಿ ಕೆಲಸ ಮಾಡಬೇಕೆಂದು ಇದೇ ಸಂದರ್ಭದಲ್ಲಿ ನೂತನ ಇಒ ಶಿವರಾಜಯ್ಯ ಅವರು ಸಿಬ್ಬಂದಿಗಳಿಗೆ ಕರೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಪಂಚಾಯಿತಿಯ ವಿವಿಧ ವಿಭಾಗದ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.